ಮಳವಳ್ಳಿ: ಸಾರ್ವಜನಿಕ ಸ್ಮಶಾನ ಜಾಗದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಮುಂದಾಗಿ ರುವುದನ್ನು ವಿರೋಧಿಸಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮ ಪಂಚಾಯಿತಿ ನೆಲ್ಲೂರು ಗ್ರಾಮಸ್ಥರು ತಾಲ್ಲೂಕು ಆಡಳಿತ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಗ್ರಾಮದ ಮುಖಂಡರು ತಹಶೀಲ್ದಾರ್ ಎಂ.ವಿಜಯಣ್ಣ ಅವರಿಗೆ ಮನವಿ ಸಲ್ಲಿಸಿ ನೆಲ್ಲೂರು ಗ್ರಾಮದ ಅಪ್ಪುಗೌಡನಹಳ್ಳಿ ಸರ್ವೆ ನಂ.೧೦೮ರ ಎರಡು ಎಕರೆ ಜಾಗವನ್ನು ಸ್ಮಶಾನಕ್ಕಾಗಿ ಕಾಯ್ದಿರಿಸಿದ್ದು, ಆದರೆ ಅಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿರ್ಧರಿಸಿರುವುದು ಸರಿಯಲ್ಲ. ಇದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.
ಸ್ಮಶಾನದ ಎದುರುಗಡೆ ಮಳವಳ್ಳಿಯಮ್ಮನ ದೇವಸ್ಥಾನ ಇದೆ. ಪ್ರತಿ ದಿನ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಈ ರಸ್ತೆಯಲ್ಲಿ ಸಾವಿರಾರು ಜನರು ತಿರುಗಾಡುತ್ತಾರೆ. ವರ್ಷಕ್ಕೊಮ್ಮೆ ಸಿಡಿ ಹಬ್ಬ ಹಾಗೂ ಕೊಂಡೋತ್ಸವ ಆಚರಣೆ ಮಾಡಿ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಮಾಡಲಾಗುತ್ತದೆ. ಹೀಗಾಗಿ ಘಟಕ ನಿರ್ಮಾಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನಂದೀಶ್, ನಾಗಪ್ಪ, ಮುಖಂಡರಾದ ಶಿವಲಿಂಗ, ಎನ್.ಎಂ. ದೇವರಾಜು, ಮರಿಗೌಡ, ನಿಂಗರಾಜು, ಸಿದ್ದರಾಮು, ಚಾಮರಾಜು, ರಾಜಣ್ಣ ಸೇರಿದಂತೆ ಹಲವರು ಇದ್ದರು.
ವರದಿ: ಮಲ್ಲಿಕಾರ್ಜುನ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ