ಮಳವಳ್ಳಿ :; ತಾಲ್ಲೂಕಿನ ನೊಂದಾಯಿತ ಕಟ್ಟಡ ನಿರ್ಮಾಣ ಹಾಗೂ ಇತರೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್ ಗಳನ್ನು ವಿತರಿಸುವ ಎರಡನೇ ಹಂತದ ಕಾರ್ಯಕ್ರಮ ಇಂದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಈ ಹಿಂದೆ ಶಾಸಕ ಡಾ ಕೆ ಅನ್ನದಾನಿ ನೇತೃತ್ವದಲ್ಲಿ ಕಾರ್ಮಿಕರಿಗೆ ಇದೇ ಅಂಬೇಡ್ಕರ್ ಭವನದಲ್ಲಿ ಎರಡು ಸಾವಿರ ಕಿಟ್ ಗಳನ್ನು ವಿತರಿಸಲಾಗಿತ್ತು ಆದರೆ ಇನ್ನೂ ಸಾಕಷ್ಟು ಜನ ಕಾರ್ಮಿಕರಿಗೆ ಈ ಕಿಟ್ ಸಿಕ್ಕಿಲ್ಲ ಎಂಬ ವಿಚಾರ ತಿಳಿದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್ ಸಿ ಕೋಟಾದಲ್ಲಿ ಒಂದು ಸಾವಿರ ಕಿಟ್ ಗಳನ್ನು ನೀಡಿದ್ದು ಈ ಕಿಟ್ ಗಳ ವಿತರಣೆ ಕಾರ್ಯಕ್ರಮ ಇಂದು ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇ ಗೌಡ ಅವರು ಕರೋನ ಹಾವಳಿಯಿಂದ ಬಡವರು ಕಾರ್ಮಿಕರು ಮಧ್ಯಮ ವರ್ಗದ ಜನರ ಬದುಕು ತತ್ತರಿಸಿ ಹೋಗಿದ್ದು ದೈನಂದಿನ ಹೊಟ್ಟೇ ಪಾಡಿಗೂ ಪರದಾಡುವ ಸ್ಥಿತಿ ನಿರ್ಮಾಣ ವಾಗಿದೆ ಎಂದು ವಿಷಾಧಿಸಿದರು.
ಎರಡನೇ ಅಲೆ ಸಂದರ್ಭದಲ್ಲಿ ಜನರ ನಿರ್ಲಕ್ಷ್ಯತೆ ಯಿಂದ ಭಾರಿ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿತು ಎಂದು ಆತಂಕಿ ಸಿದ ಅವರು ಮೂರನೇ ಅಲೆ ಬರುತ್ತಿರುವ ಈ ಸಂದರ್ಭದಲ್ಲಿ ಹಿಂದಿನ ತಪ್ಪುಗಳು ಮರುಕಳಿಸ ದಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸ ಬೇಕೆಂದು ಕರೆ ನೀಡಿದರು.
ಶಾಸಕ ಡಾ ಕೆ ಅನ್ನದಾನಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷೆ ರಾಧ ನಾಗರಾಜು, ಉಪಾಧ್ಯಕ್ಷ ಟಿ ನಂದಕುಮಾರ್. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಎಸ್ಸಿ ವಿಭಾಗದ ಅಧ್ಯಕ್ಷ ನಂಜುAಡ ಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣಾಧಿ ಕಾರಿ ಜನಾರ್ಧನ್, ಪುರಸಭೆಯ ಮುಖ್ಯಾಧಿಕಾರಿ ಪವನ್ ಸೇರಿದಂತೆ ಹಲವಾರು ಪುರಸಭಾ ಸದಸ್ಯರು ಮುಖಂಡರು ಕಾರ್ಯಕ್ರಮ ದಲ್ಲಿ ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ