ಮಳವಳ್ಳಿ : ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾ ಪಂಗೆ ಸೇರಿದ ಬುಗತಗ ಹಳ್ಳಿಯ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಇರುವ ಕೆರೆಯ ಆವರಣದಲ್ಲಿ ನಡೆಯುತ್ತಿರುವ ನರೇಗ ಯೋಜನೆಯ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಂಡ್ಯ ಜಿ ಪಂ ಆಡಳಿತಾಧಿಕಾರಿಗಳಾದ ಡಾ. ವಿ ರಾಮ್ ಪ್ರಸಾತ್ ಮನೋಹರ್ ಹಾಗೂ ಜಿ ಪಂ ಸಿಇಓ ದಿವ್ಯ ಪ್ರಭು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿಯ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಕೂಲಿಕಾರರಿಗೆ ಸಕಾಲಕ್ಕೆ ಕೆಲಸ, ಜಾಬ್ ಕಾಡ್೯ಸಹ ನೀಡದಿರುವುದ ಜೊತೆಗೆ ಇನ್ನಿತರ ಸೌಕರ್ಯ ನೀಡದೆ ಕೂಲಿಕಾರರಿಗೆ ಅನಗತ್ಯ ತೊಂದರೆ ನೀಡುತ್ತಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆಯ ದೇವಿ, ಸುಶೀಲ, ಸೇರಿದಂತೆ ಕೂಲಿಕಾರರು ದೂರಿದರೆ, ಇದಕ್ಕೆ ಪ್ರತಿಯಾಗಿ ಕಾಮಗಾರಿ ಸ್ಥಳಕ್ಕೆ ಜನಪ್ರತಿನಿಧಿಗಳ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾದರೆ ಸ್ಥಳಕ್ಕೆ ಬರಲು ನೀವು ಯಾರು, ಕಾಮಗಾರಿಯ ಬಗ್ಗೆ ಪ್ರಶ್ನೆ ಮಾಡಲು ನಿಮಗೇನು ಅಧಿಕಾರ ಇದೆ ಎಂದು ಪ್ರಶ್ನೆ ಮಾಡುತ್ತ ಜನಪ್ರತಿನಿಧಿಗಳ ಜೊತೆ ಅಗೌರವಯುತ ವರ್ತನೆ ತೋರುತ್ತಾರೆ ಎಂದು ಮಹಿಳಾ ಸಂಘಟನೆಯ ಮುಖಂಡರು ಹಾಗೂ ಕೂಲಿಕಾರರ ವಿರುದ್ದ ಗ್ರಾ ಪಂ ಅಧ್ಯಕ್ಷೆ ಉಮಾ ಹಾಗೂ ಕೆಲ ಸದಸ್ಯರು ಆರೋಪಿಸಿದರು. ಈ ಸಂದರ್ಭದಲ್ಲಿ ಎರಡು ಕಡೆಯವರ ನಡುವೆ ಪರಸ್ಪರ ಮಾತಿನ ವಾಗ್ವಾದ ನಡೆದು ಕೆಲಕಾಲ ಗೊಂದಲಮಯ ವಾತಾವರಣ ನಿರ್ಮಾಣ ವಾಗಿತ್ತು.
ಕೂಡಲೇ ಮಧ್ಯ ಪ್ರವೇಶಿಸಿ ಎರಡು ಕಡೆಯವರನ್ನು ಸಮಾಧಾನ ಪಡಿಸಿದ ಜಿ ಪಂ ಆಡಳಿತಾಧಿಕಾರಿ ಡಾ. ವಿ ರಾಮ್ ಪ್ರಸಾತ್ ಮನೋಹರ್ ಅವರು ಎರಡು ಕಡೆಯವರು ಪರಸ್ಪರ ಪ್ರತಿಷ್ಠೆಯನ್ನು ಮುಂದು ಮಾಡಿಕೊಂಡು ಪರಸ್ಪರ ಕಿತ್ತಾಟಕ್ಕೆ ಇಳಿದರೆ ಅಭಿವೃದ್ಧಿ ಕಾಮಗಾರಿ ಕುಂಠಿತ ಗೊಂಡು ಜನರಿಗೆ ಕೂಲಿ ಒದಗಿಸಲು ಕಷ್ಟವಾಗುತ್ತದೆ ಆದ್ದರಿಂದ ಅಧಿಕಾರಗಳು ಹಾಗೂ ಜನಪ್ರತಿನಿಧಿಗಳು ಒಮ್ಮತದಿಂದ ಚರ್ಚೆ ನಡೆಸಿ ಕಾಮಗಾರಿಯ ಕ್ರಿಯಾ ಯೋಜನೆಯನ್ನು ತಯಾರಿಸಿ ಸಕಾಲಕ್ಕೆ ಕೂಲಿಕಾರರಿಗೆ ಸಕಾಲಕ್ಕೆ ಉದ್ಯೋಗ ಒದಗಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕಾರಿಯಬೇಕು ಎಂದು ಕಿವಿ ಮಾತು ಹೇಳಿದರು. ಕಾಮಗಾರಿಯಲ್ಲಿ ಯಾವುದೇ ಲೋಪ ಕಂಡು ಬಂದಲ್ಲಿ ಸಂಬoಧಿಸಿದ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದಲ್ಲಿ ಅಧಿಕಾರಿಗಳು ಈ ಕುರಿತು ಕ್ರಮ ವಹಿಸುತ್ತಾರೆ ಎಂದು ತಿಳಿಸಿದರು.
ತಾ ಪಂ ಇಓ ರಾಮಲಿಂಗಯ್ಯ ಸೇರಿದಂತೆ ಹಲವಾರು ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ