December 22, 2024

Bhavana Tv

Its Your Channel

ಕರೋನಾ ಎದುರಿಸಲು ಮಂಡ್ಯ ಜಿಲ್ಲೆ ಸನ್ನದ್ದ ಜಿಲ್ಲಾಧಿಕಾರಿ ಮಾಹಿತಿ

ಮಳವಳ್ಳಿ : ಕರೋನ ಮೂರನೇ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು ಜಿಲ್ಲೆಯ ೭ ತಾಲೂಕುಗಳಲ್ಲೂ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ಅಶ್ವಥಿ ತಿಳಿಸಿದರು .
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕದ ಅಂತಿಮ ಹಂತದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು ಮಂಡ್ಯದ ಮಿಮ್ಸ್ ಮತ್ತು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸರ್ಕಾರದ ಅನುದಾನದಲ್ಲಿ ಘಟಕಗಳನ್ನು ನಿರ್ಮಾಣ ಸಲಾಗುತ್ತಿದ್ದು ಉಳಿದ ೫ ತಾಲೂಕುಗಳಲ್ಲಿ ಸಿಆರ್ ಎಫ್ ಫಂಡ್ ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಕೋವಿಡ್ ಮೂರನೇ ಅಲೆ ಬಂದರೂ ಅದನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದರು .
ಇದೇ ವೇಳೆಯಲ್ಲಿ ತಹಸೀಲ್ದಾರ್ ಎಂ ವಿಜಯಣ್ಣ . ತಾಲ್ಲೂಕು ವೈದ್ಯಾಧಿಕಾರಿ ಡಾ. ವೀರ ಭದ್ರಪ್ಪ , ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಮಹದೇವ್ ನಾಯಕ್ ಸೇರಿದಂತೆ ಹಲವರಿದ್ದರು

ವರದಿ: ಮಲ್ಲಿಕಾರ್ಜುನ ಮಳವಳ್ಳಿ

error: