ಮಳವಳ್ಳಿ : ಮಳವಲ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾದ ಎಂ.ಕೆ.ಉಮಾ ಹಾಗೂ ಉಪಾಧ್ಯಕ್ಷರಾಗಿ ವೆಂಕಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು ೧೮ ಸದಸ್ಯ ಬಲದ ಈ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದು ಈ ಎರಡು ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾದ ತಾ.ಪಂ ಇಒ ರಾಮಲಿಂಗಯ್ಯ ಘೋಷಿಸಿದರು.
ಘೋಷಣೆ ಯಾಗುತ್ತಿದ್ದಂತೆ ಜೆಡಿಎಸ್ ಮುಖಂಡರು ಹಾಗೂ ಅಧ್ಯಕ್ಷರ ಬೆಂಬಲಗಿರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷೆ ಉಮಾ ಉಪಾಧ್ಯಕ್ಷರಾದ ವೆಂಕಟಪ್ಪ ಅವರು ತಾನು ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಲು ನೆರವಾದ ಶಾಸಕ ಡಾ ಕೆ ಅನ್ನದಾನಿ ಸೇರಿದಂತೆ ಎಲ್ಲಾ ಜೆಡಿಎಸ್ ಮುಖಂಡರು ಹಾಗೂ ಸದಸ್ಯರಿಗೆ ತಮ್ಮ ಧನ್ಯವಾದಗಳನ್ನು ತಿಳಿಸಿದರ ಲ್ಲದೆ ಸದ್ಯ ಜೆಡಿಎಸ್ ಪಕ್ಷದಲ್ಲಿ ಮುಂದುವರೆಯುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಪುರಸಭೆಯ ಉಪಾಧ್ಯಕ್ಷ ಟಿ ನಂದಕುಮಾರ್, ಮುಖಂಡರಾದ ನಾಗಭೂಷಣ್ ಮಹಾದೇವಸ್ವಾಮಿ, ನಾಗಮಾದಶೆಟ್ಟಿ, ರಾಜಣ್ಣ, ಸಿದ್ದರಾಜು ಮತ್ತಿತರರು ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ