December 20, 2024

Bhavana Tv

Its Your Channel

ಕಾರ್ಪೋರೇಟ್ ಕಂಪನಿಗಳು ದೇಶ ಬಿಟ್ಟು ತೊಲಗಿ; ಎಡಪಂಥೀಯ ಸಂಘಟನೆಯಿOದ ಪ್ರತಿಭಟನೆ

ಮಳವಳ್ಳಿ : ಅಂದು ಬ್ರಿಟಿಷ್ ಕಂಪನಿ ದೇಶ ಬಿಟ್ಟು ತೊಲಗಿ ಚಳುವಳಿಯ ಸ್ಮರಣಾರ್ಥವಾಗಿ ಇಂದು ಬಹುರಾಷ್ಟ್ರೀಯ ಹಾಗೂ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಘೋಷಣೆಯೊಂದಿಗೆ ಎಡ ಪಂಥೀಯ ಸಂಘಟನೆಗಳು ಪಟ್ಟಣದಲ್ಲಿ ಇಂದು ಪ್ರತಿಭಟನೆ ನಡೆಸಿದವು.
ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ಸಿಐಟಿಯು, ಜನವಾದಿ ಮಹಿಳಾ ಸಂಘಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಡಿವೈಎಫ್ ಐ, ಪ್ರಾಂತ ರೈತ ಸಂಘ, ದಲಿತ ಹಕ್ಕುಗಳ ಹೋರಾಟ ಸಮಿತಿ ಮುಂತಾದ ಸಂಘಟನೆಗಳ ಕಾರ್ಯಕರ್ತರು ದಾರಿಯುದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಕೃಷಿ ವಲಯ ಸೇರಿದಂತೆ ಸಾರ್ವಜನಿಕ ವಲಯಗಳನ್ನು ಕಬಳಿಸುತ್ತಿರುವ ಕಾರ್ಪೊರೇಟ್ ಕಂಪನಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ತಾಲ್ಲೂಕು ಕಚೇರಿ ತಲುಪಿದ ಚಳುವಳಿಗಾರರು ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾದಾಗ ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಕಚೇರಿ ಆವರಣವನ್ನು ಪ್ರವೇಶಿಸಲು ಪೊಲೀಸರು ಅಡ್ಡಿ ಪಡಿಸಿದಾಗ ಚಳುವಳಿಗಾರರು ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.
ಕೊನೆಗೂ ಕಚೇರಿ ಮುಂದೆ ಪ್ರತಿಭಟನೆ ಮುಂದುವರಿಸಿದ ಚಳುವಳಿಗಾರರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ ರಾಮಕೃಷ್ಣ ಅವರು ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷ್ ಕಂಪನಿಗಳು ದೇಶದ ಸಂಪತ್ತನ್ನು ಲೂಟಿ ಮಾಡಿದವು ಸ್ವಾತಂತ್ರ‍್ಯ ನಂತರದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ನಮ್ಮ ದೇಶದ ಕಾರ್ಪೊರೇಟ್ ಕಂಪನಿಗಳು ದೇಶದ ಕೃಷಿ, ಸೇರಿದಂತೆ ಸಾರ್ವಜನಿಕ ವಲಯಗಳಿಗೆ ತನ್ನ ಕದಂಬ ಬಾಹುಗಳನ್ನು ಚಾಚುತ್ತ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿದ್ದು ಈಗಿನ ಮೋದಿ ಸರ್ಕಾರ ಕಂಪನಿಗಳ ಪರವಾದ ಕಾನೂನು ಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಕಾರ್ಪೋರೇಟ್ ಕಂಪನಿಗಳಿಗೆ ಒಪ್ಪಿಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಈಗ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ , ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗಳೇ ದೇಶದಲ್ಲಿ ಕಂಪನಿಗಳ ಪರವಾದ ಸರ್ಕಾರ ಆಡಳಿತದಲ್ಲಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದು ಇದರಿಂದ ಬಡವರು ರೈತರು ಕಾರ್ಮಿಕರು ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು ಜೀವನ ನಿರ್ವಹಣೆಗಾಗಿ ಜನ ತತ್ತರಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿಗೆ ಮಾರಕವಾದ ಎಲ್ಲಾ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ ಅವುಗಳ ಖರೀದಿಸಲು ಮುಂದಾಗಬೇಕು, ಪೆಟ್ರೋಲ್ ಡೀಸೆಲ್ ಬೆಲೆ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ವಿಜಯಣ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ಯಲ್ಲಿ ಸಂಘಟನೆ ಗಳ ಮುಖಂಡರಾದ ತಿಮ್ಮೇಗೌಡ, ಮಹಾದೇವಮ್ಮ , ಶಿವಮಲ್ಲಯ್ಯ, ಸುಶೀಲಾ, ಶಿವಕುಮಾರ್, ಲತಾ ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳ

ಕಾರ್ಪೋರೇಟ್ ಕಂಪನಿಗಳು ದೇಶ ಬಿಟ್ಟು ತೊಲಗಿ; ಎಡಪಂಥೀಯ ಸಂಘಟನೆಯಿAದ ಪ್ರತಿಭಟನೆ

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: