May 18, 2024

Bhavana Tv

Its Your Channel

ಕೋವಿಡ್ ೩ನೇ ಅಲೆ ಹರಡದಂತೆ ತಡೆಯುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ- ಸಚಿವ ಡಾ.ನಾರಾಯಣಗೌಡ

ಮಂಡ್ಯ: ಕೋವಿಡ್ ೩ನೇ ಅಲೆಯು ಹರಡದಂತೆ ತಡೆಯುವುದು ನಾಗರಿಕ ಸಮಾಜದ ಪ್ರತಿಯೊಬ್ಬರ ಆಧ್ಯ ಕರ್ತವ್ಯವಾಗಿದೆ. ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಿ, ನಿಯಮಿತವಾಗಿ ಔಷಧಗಳನ್ನು ಸೇವಿಸುವ ಮೂಲಕ ಕೋವಿಡ್ ಮುಕ್ತ ಭಾರತವನ್ನು ನಿರ್ಮಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರಕ್ಕೆ ನಾಗರಿಕರು ಹಾಗೂ ಪ್ರಗತಿಪರ ಸಂಘಸAಸ್ಥೆಗಳು ಕೈಜೋಡಿಸಿ ಕೆಲಸ ಮಾಡಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮನವಿ ಮಾಡಿದರು ..

ಸಚಿವ ನಾರಾಯಣಗೌಡ ಅವರು ಇಂದು ಕೆ.ಆರ್.ಪೇಟೆ ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಆರೋಗ್ಯ ಸ್ವಯಂಸೇವಕರ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು..

ಕೋವಿಡ್ ಎರಡನೇ ಅಲೆಯ ತೀವ್ರತೆಯ ಪರಿಣಾಮವು ಅತ್ಯಂತ ಹೆಚ್ಚಾಗಿದೆ. ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳು ಸಮರ್ಥವಾಗಿ ನಿರ್ವಹಿಸಿವೆ. ಜಿಲ್ಲೆಯ ಎಲ್ಲಾ ಏಳೂ ತಾಲ್ಲೂಕು ಕೇಂದ್ರಗಳಲ್ಲಿಯೂ ಪ್ರಾಣವಾಯುವಾದ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗಿದೆ. ಕೋವಿಡ್ ೩ನೇ ಅಲೆಯ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿಯೂ ರಾಜ್ಯ ಸರ್ಕಾರವು ಹಲವಾರು ಮಾರ್ಗ ಸೂಚಿಗಳನ್ನು ತಯಾರಿಸಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ದಿಕ್ಕಿನಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಭಾರತೀಯರ ಜನತಾ ಪಕ್ಷವು ಆರೋಗ್ಯ ಸ್ವಯಂಭ ಸೇವಕರಿಗೆ ತರಬೇತಿ ನೀಡಿ ಈಗಿನಿಂದಲೇ ಮುಂದೆ ಎದುರಾಗಲಿರುವ ಸಮಸ್ಯೆಗಳನ್ನು ಎದುರಿಸಿ ಕೋವಿಡ್ ಸೋಂಕಿನಿAದ ಮುಕ್ತವಾದ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು..

ವೇದಬ್ರಹ್ಮ ಸಾಂಸ್ಕೃತಿಕ ಸಂಘಟಕ ಶ್ರೀ ಗೋಪಾಲಕೃಷ್ಣ ಅವಧಾನಿಗಳು ಕೋವಿಡ್ ನಿರ್ವಹಣೆಯಲ್ಲಿ ಯೋಗದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿ ನಿಯಮಿತವಾಗಿ ಯೋಗ, ಧ್ಯಾನ ಮತ್ತು ಪ್ರಾಣಾಯಾಮವನ್ನು ಮಾಡಿ ವ್ಯಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಂಡು ಕೋವಿಡ್ ಸೋಂಕು ಹರಡದಂತೆ ಜಾಗೃತರಾಗಿರಬೇಕು ಎಂದು ಮನವಿ ಮಾಡಿದರು..

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್ ವಹಿಸಿದ್ದರು. ಬಿಜೆಪಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಪ್ರಮೀಳಾ ವರದರಾಜೇಗೌಡ,
ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಮನ್ ಮುಲ್ ನಿರ್ದೇಶಕ ಕೆ.ಜಿ.ತಮ್ಮಣ್ಣ, ತಾಲ್ಲೂಕು ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಸಾರಂಗಿನಾಗರಾಜು, ತಾಲ್ಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಲತಾಮುರಳಿ, ನಗರ ಅಧ್ಯಕ್ಷೆ ಚಂದ್ರಕಲಾರಮೇಶ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಮಾಧ್ಯಮ ಸಂಚಾಲಕ ಮಂಜುನಾಥಗೌಡ, ಕರ್ತೇನಹಳ್ಳಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು..

ವರದಿ.ಡಾ.ಕೆ.ಆರ್.ನೀಲಕಂಠ ,
ಕೃಷ್ಣರಾಜಪೇಟೆ , ಮಂಡ್ಯ

error: