ಮಳವಳ್ಳಿ : ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ೯೭ ಲಕ್ಷ ಹಾಗೂ ಅವ್ವೇರಹಳ್ಳಿ ಗ್ರಾಮದಲ್ಲಿ ೩೫ ಲಕ್ಷ ರೂ ವೆಚ್ಚದಲ್ಲಿ ಮನೆಮನೆಗಳಿಗೆ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಜೆಜೆಎಂ ಯೋಜನೆಗೆ ಶಾಸಕ ಡಾ ಕೆ ಅನ್ನದಾನಿ ಚಾಲನೆ ನೀಡಿದರು.
ಇದರ ಜೊತೆಗೆ ಸುಜ್ಜಲೂರು ಗ್ರಾಮದಲ್ಲಿ ಸುಮಾರು ೮ ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, ಅವ್ವೇರಹಳ್ಳಿ ಗ್ರಾಮದಲ್ಲಿ ೧೫ ಲಕ್ಷ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಜೊತೆಗೆ ದುಗ್ಗನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮೂರು ಶಾಲಾ ಕೊಠಡಿಗಳನ್ನು ಸಹ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರಿಗೆ ಉಂಟಾಗಿದ್ದ ಕುಡಿಯುವ ನೀರಿನ ಕೊರತೆಯನ್ನು ನೀಗಿಸುವುದರ ಜೊತೆಗೆ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅತ್ಯುತ್ತಮ ಯೋಜನೆ ಇದಾಗಿದೆ
ಮತ್ತೊಂದೆಡೆ ಹೆಚ್ ಡಿ ಕುಮಾರಸ್ವಾಮಿ ಅವರ ಸರ್ಕಾರ ಮಂಡ್ಯ ಜಿಲ್ಲೆಗೆ ವಿಶೇಷವಾಗಿ ನೀಡಿದ್ದ ಪ್ರತೀ ಮನೆಗೂ ಶುದ್ದ ಕಾವೇರಿ ನೀರು ಪೂರೈಕೆ ಮಾಡುವ ಜಲಧಾರೆ ಯೋಜನೆಯ ಸಹ ಇಷ್ಟರಲ್ಲೇ ಆರಂಭವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ , ಮಾಜಿ ಜಿ ಪಂ ಸದಸ್ಯರಾದ ತಳಗವಾದಿ ಹನುಮಂತು, ದುಗ್ಗನಹಳ್ಳಿ ಗ್ರಾ ಪಂ ಅಧ್ಯಕ್ಷೆ ಮಂಗಳಗೌರಮ್ಮ, ಮುಖಂಡ ರಾದ ಹಣಕೊಳ ಸೋಮಶೇಖರ್, ದುಗ್ಗನಹಳ್ಳಿ ನಾಗರಾಜು, ಮತ್ತಿತರರು ಹಾಜರಿದ್ದರು.
ವರದಿ: ಮಲ್ಲಿಕಾರ್ಜುಜನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ