December 22, 2024

Bhavana Tv

Its Your Channel

ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನೆ

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

ಮಳವಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಸಂಸ್ಥೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಗಂಗಾಧರ ರೈಅವರು ಉದ್ಘಾಟಿಸಿ ಮಾತನಾಡಿ ಈಗಾಗಲೇ ಸ್ವಸಹಾಯ ಸಂಘಟನೆಗಳ ರಚನೆ ಮೂಲಕ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಪೂರಕವಾದ ಉಳಿತಾಯ ಯೋಜನೆ ಸಾಲ ಸೌಲಭ್ಯಗಳನ್ನು ಒದಗಿಸುವ ಯೋಜನೆ ಅರಂಭಿಸಿ ಈ ವರೆಗೆ ಬ್ಯಾಂಕ್‌ಗಳ ಮೂಲಕ ೬೦೦ ಕೋಟಿ ರೂ ಸಾಲ ಕೊಡಿಸಲಾಗಿದ್ದು ಶೇ ೧೦೦ ರಷ್ಟು ಸಾಲ ಮರುಪಾವತಿಯಾಗುತ್ತಿದೆ ಎಂದು ತಿಳಿಸಿದರು.
ಇದಲ್ಲದೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವೃದ್ದರಿಗೆ ಮಾಶಾಸನ ಯೋಜನೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಂಸ್ಥೆ ಇದೀಗ ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವ ದೃಷ್ಟಿಯಿಂದ ಡಿಜಿಟಲ್ ಸೇವಾ ಕೇಂದ್ರವನ್ನು ತೆರೆದಿದ್ದು , ಅದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲೂ ಕೇಂದ್ರಗಳನ್ನು ತೆರೆಯಲಾಗು ವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ , ತಾಲ್ಲೂಕು ಯೋಜನಾಧಿಕಾರಿ ಲೀಲಾವತಿ ಜನಜಾಗೃತಿ ವೇದಿಕೆ ಮಾಗನೂರು ಶಿವಕುಮಾರ, ಶ್ರೀಕಂಠಸ್ವಾಮಿ, ಸೇರಿದಂತೆ ಮತ್ತಿತ್ತರರು ಇದ್ದರು

error: