ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
ಮಳವಳ್ಳಿ ; ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟಿದ್ದು ಆತನ ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಬಾಷಸಮುದ್ರ ಗ್ರಾಮದಲ್ಲಿ ಜರುಗಿದೆ.
ಬಾಣಸಮುದ್ರ ಗ್ರಾಮದ ವಾಸಿ ಹನುಮಂತೆಗೌಡ ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದು ಇವರ ಮಗ ಸಂಜಯ್‌ಗೂ ಸಹ ವಿದ್ಯುತ್ ತಗುಲಿ ಗಾಯಗೊಂಡಿದ್ದು ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
೪೮ ವರ್ಷ ವಯಸ್ಸಿನ ಮೃತ ಹನುಮಂತೇಗೌಡ ತಮ್ಮ ಜಮೀನಿನಲ್ಲಿ ಭತ್ತದ ನಾಟಿ ಕೆಲಸ ಮಾಡುವಾಗ ಜಮೀನಿನ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಇದ್ದಕ್ಕಿದ್ದಂತೆ ತುಂಡಾಗಿ ಬಿದ್ದಿದ್ದು ತಂತಿಯನ್ನು ಆಕಸ್ಮಿಕವಾಗಿ ತುಳಿದು ಚಿಕಿತ್ಸೆಗಾಗಿ ಹಲಗೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುತ್ತಾರೆ ಎಂದು ವರದಿಯಾಗಿದೆ.
ಮೃತ ಹನುಮಂತೇಗೌಡ ಅವರ ಮಗ ಸಂಜಯ್ (೨೩)ಗೂ ವಿದ್ಯುತ್ ಸ್ಪರ್ಶಿಸಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ನೀಡಲಾಗಿದೆ.
ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ