May 17, 2024

Bhavana Tv

Its Your Channel

ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿ ಜನವಾದಿ ಮಹಿಳಾ ಸಂಘಟನೆಯಿOದ ಪ್ರತಿಭಟನೆ

ಮಳವಳ್ಳಿ : ಗ್ಯಾಸ್ ಸಿಲಿಂಡರ್ ದರವನ್ನು ಮನಬಂದoತೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಇಂದು ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಇನ್ನಿತರ ಪ್ರಗತಿಪರ ಸಂಘಟನೆ ಗಳು ಪ್ರತಿಭಟನೆ ನಡೆಸಿದವು.
ಪಟ್ಟಣದ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜನವಾದಿ ಮಹಿಳಾ ಸಂಘಟನೆ, ಡಿ ವೈ ಎಫ್ ಐ, ಪ್ರಾಂತ ರೈತ ಸಂಘ ಬೀದಿ ಬದಿ ವ್ಯಾಪಾರಿಗಳ ಸಂಘ ಸೇರಿದಂತೆ ಇನ್ನಿತರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ತೈಲ ಬೆಲೆ ಏರಿಕೆ ಬೆನ್ನಲ್ಲೇ ಅಡುಗೆ ಅನಿಲ ಬೆಲೆಯನ್ನು ಮನ ಬಂದoತೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ ಅವರು ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಲಾಕ್ ಡೌನ್‌ನಿಂದಾಗಿ ಉದ್ಯೋಗವನ್ನು ಕಳೆದುಕೊಂಡು ಭಾರಿ ಸಂಕಷ್ಟಕ್ಕೆ ಒಳಗಾಗಿರುವ ಈ ಸಂದರ್ಭದಲ್ಲಿ ಮನಬಂದoತೆ ತೈಲ ಬೆಲೆ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ಕಿಡಿ ಕಾರಿದರು.
ಜನಸಾಮಾನ್ಯರ ಬದುಕನ್ನು ನರಕ ಮಾಡಿ ಕಾರ್ಪೊರೇಟ್ ಕಂಪನಿಗಳಿಗೆ ಮಣೆ ಹಾಕಲು ಹೊರಟಿದೆ ಎಂದು ಆರೋಪಿಸಿದರು.
ಒಂದೆಡೆ ಬೆಲೆ ಏರಿಕೆ ಮೂಲಕ ನೇರವಾಗಿ ಜನರ ಸುಲಿಗೆ ಮಾಡುತ್ತಿರುವ ಮೋದಿ ಸರ್ಕಾರ ಮತ್ತೊಂದೆಡೆ ಪರೋಕ್ಷವಾಗಿ ಕಾರ್ಪೊರೇಟ್ ಕಂಪನಿಗಳು ಜನರ ಸುಲಿಗೆ ಮಾಡಲು ಪರವಾನಗಿ ನೀಡಿ ಜನರ ಬದುಕನ್ನು ನರಕ ಮಾಡುತ್ತಿರುವ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಜನ ತುದಿಕಾಲನಲ್ಲಿ ನಿಂತಿದ್ದಾರೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಸುಶೀಲ, ಸವಿತ, ಗೌರಮ್ಮ, ಭರತ್ ರಾಜ್, ಶಿವಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: