December 19, 2024

Bhavana Tv

Its Your Channel

ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ

ಮಳವಳ್ಳಿ : ಈ ದೇಶದಲ್ಲಿ ಲಂಚರಹಿತವಾದ ಏಕೈಕ ಪವಿತ್ರ ಹುದ್ದೆ ಎಂದರೆ ಅದು ಶಿಕ್ಷಕ ವೃತ್ತಿ ಎಂದು ಶಾಸಕ ಡಾ. ಕೆ ಅನ್ನದಾನಿ ಹೇಳಿದ್ದಾರೆ.
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿ ಯಿಂದ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು ಶಿಕ್ಷಕರು ಈ ದೇಶದ ಭವಿಷ್ಯತ್ ಸತ್ಪ್ರಜೆಗಳನ್ನು ತಯಾರು ಮಾಡುವ ಕಾರ್ಖಾನೆ ಗಳಿದ್ದಂತೆ ಇಂತಹ ಕಾರ್ಖಾನೆಯಿಂದಲೇ ಅಬ್ದುಲ್ ಕಲಾಂ, ರಾಷ್ಟ್ರ ಪತಿಗಳು ಪ್ರಧಾನಿ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ರಂತಹ ಮಹನೀಯರು ತಯಾರಾಗುತ್ತಾರೆ ಎಂದು ಪ್ರಶಂಸಸಿದರು.
ಕೋವಿಡ್ ಸೇರಿದಂತೆ ಶಿಕ್ಷಣೇತರ ಕಾರ್ಯಗಳಿಗೆ ಶಿಕ್ಷಕರ ಬಳಕೆಯಿಂದ ಶಿಕ್ಷಕರು ಕಾರ್ಯಾಭಾರದ ಒತ್ತಡಗಳಿಗೆ ಒಳಗಾಗುವುದರ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಯತ್ತ ಒತ್ತು ನೀಡಲಾಗುತ್ತಿಲ್ಲ ಎಂಬುದು ಸೇರಿದಂತೆ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ವಿಧಾನ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.
ಪುರಸಭಾಧ್ಯಕ್ಷೆ ರಾಧ ನಾಗರಾಜು ಸಮಾರಂಭವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ನಿಧನರಾದ ಶಿಕ್ಷಕರ ಕುಟುಂಬದವರು, ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಟಿ ನಂದಕುಮಾರ್, ತಾ ಪಂ ಇಒ ರಾಮಲಿಂಗಯ್ಯ. ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಅಕ್ಷರ ದಾಸೋಹದ ಸಹಾಯಕ ನಿರ್ಧೇಶಕ ಜಯಪ್ರಕಾಶ್, ಮತ್ತಿತರರು ಸಮಾರಂಭ ದಲ್ಲಿ ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: