April 26, 2024

Bhavana Tv

Its Your Channel

ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಸಾಪದ ಮಾಜಿ ಗೌರವ ಕಾರ್ಯದರ್ಶಿ ಸಿ.ಕೆ. ರಾಮೇ ಗೌಡ

ಮಳವಳ್ಳಿ: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕ್ರಮಗಳಲ್ಲಿ ಸಾಮಾಜಿಕ, ಪ್ರಾದೇಶಿಕ, ಮಹಿಳಾ, ಹಾಗೂ ಪ್ರತಿಭಾ ನ್ಯಾಯಗಳನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಯೊಂದಿಗೆ ಪರಿಷತ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದಾಗಿ ಕಸಾಪದ ಮಾಜಿ ಗೌರವ ಕಾರ್ಯದರ್ಶಿ ಸಿ.ಕೆ. ರಾಮೇ ಗೌಡ ತಿಳಿಸಿದರು..

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ನಾಲ್ಕು ದಶಕಗಳಿಂದ ಕನ್ನಡದ ಪರಿಚಾರಕನಾಗಿ, ಪರಿಷತ್‌ನ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದು, ನಾಡು-ನುಡಿಯ ವಿಚಾರದಲ್ಲಿ ಸದಾ ಮುಂದೆ ನಿಂತು ಕೆಲಸ ಮಾಡುತ್ತಿದ್ದೇನೆ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಸದಸ್ಯರಾಗಿ ೪೦ ವರ್ಷಗಳಿಂದ ಕನ್ನಡ ಪರ ಹೋರಾಟದಲ್ಲಿ ಭಾಗಿಯಾಗಿ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಕನ್ನಡ ಪರ ಚಳುವಳಿಗಾರನಾಗಿ ಚಿಂತಕರ ಆಶಯಗಳೊಂದಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲು ದುಡಿಯುತ್ತೇನೆ ಎಂದರು.
ಅಖಿಲ ಭಾರತ ಕನ್ನಡ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆದ್ಯೆತೆಯ ಮೇರೆಗೆ ಮಹಿಳಾ ಸಾಹಿತಿಯೊಬ್ಬರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಅವಶ್ಯಕತೆ ಇದೆ. ಪುಸ್ತಕ ಪ್ರಕಾಶನಕ್ಕೆ ಹೆಚ್ಚಿನ ಆದ್ಯತೆ ನೀಡುವುದು. ಕನ್ನಡ ಪ್ರಾಚೀನ ಕೃತಿಗಳು, ಹಿರಿಯ ಸಾಹಿತಿಗಳ ಎಲ್ಲ ಕೃತಿಗಳು ಹಾಗೂ ಪ್ರತಿಭಾವಂತ ಯುವ ಬರಹಗಾರರ ಆಯ್ದ ಹಸ್ತಪ್ರತಿಗಳನ್ನು ಕೃತಿಗಳ ರೂಪದಲ್ಲಿ ಪ್ರಕಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ ಎಂದು ಹೇಳಿದರು.
ರಾಜ್ಯಾದ್ಯಂತ ಸಾಹಿತಿಗಳು, ಕನ್ನಡ ಅಭಿಮಾನಿಗಳು, ವಿವಿಧ ಮಠಾಧೀಶರು, ಸಂಘ-ಸAಸ್ಥೆಯ ಪದಾಧಿಕಾರಿಗಳು ಬೆಂಬಲ ಘೋಷಣೆ ಮಾಡಿದ್ದು, ಚುನಾವಣೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಚಳುವಳಿಯ ಮೂಲಕ ಹೋರಾಟದ ಹಾದಿಯಲ್ಲಿ ಬಂದಿರುವ ತನ್ನನ್ನು ಕನ್ನಡ ಸಾಹಿತ್ಯ ಪರಿಷತ್ನ ಸದಸ್ಯರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ ತಾಲ್ಲೂಕು ವೀರಶೈವ ಲಿಂಗಾಯಿತ ವಿಚಾರ ವೇದಿಕೆಯ ಕಾರ್ಯದರ್ಶಿ ರುದ್ರಸ್ವಾಮಿ, ಮುಖಂಡರಾದ ದಯಾನಂದ ಕಟ್ಟೆ, ವಿಜಯಕುಮಾರ್ ಇದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: