ಮಳವಳ್ಳಿ : ಮಳವಳ್ಳಿ ಪಟ್ಟಣದಲ್ಲಿ ಬೃಹತ್ ಕನಕ ಭವನವೊಂದು ನಿರ್ಮಾಣ ವಾಗಬೇಕೆಂಬ ಕುರುಬ ಸಮುದಾಯದ ಬಹಳ ವರ್ಷಗಳ ಹಂಬಲಕ್ಕೆ ಬರುವ ಅಕ್ಟೋಬರ್ ೩ರಂದು ಚಾಲನೆ ದೊರೆಯಲಿದೆ.
ಮಳವಳ್ಳಿ ಪಟ್ಟಣದ ಹೊರವಲಯದ ಮೂಗನಕೊಪ್ಪಲು ಗ್ರಾಮದ ಬಳಿ ಸುಮಾರು ಒಂದು ಎಕರೆ ಜಾಗದಲ್ಲಿ ಕನಕ ಭವನ ನಿರ್ಮಾಣಕ್ಕೆ, ಬರುವ ಅಕ್ಟೋಬರ್ ೩ ರಂದು ಚಾಲನೆ ನೀಡಲಾಗುವುದು ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕನಕಭವನ ನಿರ್ಮಾಣ ಸಂಬAಧ ಕುರುಬ ಸಮುದಾಯ ಮುಖಂಡರ ಜತೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ನಡೆಯುವ ಕಾರ್ಯಕ್ರಮವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಬೈರತಿ ಬಸವರಾಜು, ಎಂಟಿಬಿ ನಾಗರಾಜು, ಶಾಸಕರಾದ ಬಂಡೆಪ್ಪ ಕಾಶಂಪೂರ್, ಎಚ್.ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಕುರುಬ ಸಮುದಾಯದ ಬಹುದಿನಗಳ ಬೇಡಿಕೆ ಈಗ ಈಡೇರುತ್ತದೆ ಎಂದ ಶಾಸಕರು ಕಳೆದ ವಿಧಾನಸಭೆ ಚುನಾವಣೆ ಮುನ್ನ ಕೊಟ್ಟ ಮಾತಿನಂತೆ ಕನಕಭವನ ನಿರ್ಮಾಣ ಮಾಡುತ್ತಿದ್ದು ಮೂಗನಕೊಪ್ಪಲು ಗ್ರಾಮದ ಬಳಿ ಈ ಭವನ ನಿರ್ಮಾಣಕ್ಕೆ ಒಂದು ಎಕರೆ ಸರ್ಕಾರಿ ಜಮೀನನ್ನು ಒದಗಿಸಲಾಗಿದ್ದು ಸುಮಾರು ೨.೫ ಕೋಟಿ ರೂ.ವೆಚ್ಚದಲ್ಲಿ ಭವ್ಯ ಭವನ ನಿರ್ಮಿಸಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಕ್ಷೇತ್ರದ ನನ್ನ ರಾಜಕೀಯ ವಿರೋಧಿಯು ಈ ಭವನ ನಿರ್ಮಾಣ ಕುರಿತು ಈಗಾಗಲೇ ಅಪಪ್ರಚಾರ ಮಾಡುತ್ತಾ ಹಣವಿಲ್ಲದೇ ಭೂಮಿಪೂಜೆ ಮಾಡಲಾಗುತ್ತಿದೆ ಎನ್ನುತ್ತಿದ್ದಾರೆ. ಶಾಸಕರ ಅನುದಾನ, ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ಹಲವು ಮೂಲಗಳಿಂದ ಈಗಾಗಲೇ ಸುಮಾರು ಒಂದು ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ. ಸರ್ಕಾರ, ಸಂಘ-ಸAಸ್ಥೆಗಳು ಹಾಗೂ ದಾನಿಗಳ ಸಹಾಯದಿಂದ ಉತ್ತಮ ರೀತಿಯಲ್ಲಿ ಭವನ ನಿರ್ಮಾಣ ಮಾಡಲಾಗುವುದು ಎಂದರು.
ಸಿದ್ದರಾಮಯ್ಯನವರು ನಾನು ಬೇರೆ ಬೇರೆ ಪಕ್ಷವಿರಬಹುದು ಆದರೆ ನಾನು ಸಿದ್ದರಾಮಯ್ಯ ಅವರ ಶಿಷ್ಯ. ಒಬ್ಬ ದಲಿತ ಶಾಸಕ ಎಂದು ನನ್ನನ್ನು ಕಂಡರೆ ಅವರಿಗೆ ಅಪಾರವಾದ ಪ್ರೀತಿ. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೆ ಆದರೆ ಕೆಲವರು ಸುಳ್ಳು ಹೇಳಿ ದಿಕ್ಕುತಪ್ಪಿಸಿದ್ದಾರೆ ಎಂದು ಹೇಳಿದರು.
ಇತ್ತೀಚೆಗೆ ಸಂಸದೆ ಸುಮಲತಾ ಅಂಬರೀಶ್ ಅವರು ಕಿರುಗಾವಲು, ಕಲ್ಕುಣಿ, ಪೂರಿಗಾಲಿ ಗ್ರಾಮಗಳಲ್ಲಿ ಜೆಜೆಎಂ ಯೋಜನೆಗೆ ಭೂಮಿಪೂಜೆ ಮಾಡಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಶಾಸಕರು ನಾನು ಅಧಿವೇಶನ ದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಂಸದರು ಕ್ಷೇತ್ರಕ್ಕೆ ಬಂದು ಜಲಜೀವನ್ ಮಿಷನ್ ಯೋಜನೆಗೆ ಭೂಮಿಪೂಜೆ ನೆರವೇರಿಸಿದ್ದು ಶಾಸಕರ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಆರೋಪಿಸಿದರು.
ಯೋಜನೆಗೆ ಕೇಂದ್ರ ಸರ್ಕಾರದಿಂದ ಶೇ.೩೭ರಷ್ಟು ಮಾತ್ರ ಅನುದಾನ ನೀಡುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಕೊಡಬೇಕು. ಸಂಸದರಿಗೆ ಭೂಮಿಪೂಜೆ ಮಾಡುವ ಹಕ್ಕಿಲ್ಲ. ಶಾಸಕರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದು, ಈ ಬಗ್ಗೆ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ವಿರುದ್ದ ಶಾಸಕ ಡಾ.ಕೆ.ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಉಪಾಧ್ಯಕ್ಷ ಟಿ.ನಂದಕುಮಾರ್ ಹಾಗೂ ಕುರುಬ ಸಮುದಾಯ ವಿವಿಧ ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ರಾಮಚಂದ್ರ, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಬುಲೆಟ್ ನಿಂಗಣ್ಣ, ಟಿಎಪಿಸಿಎಂಎಸ್ ನಿರ್ದೇಶಕ ರಾಜೇಶ್, ಚಿಕ್ಕಮುಲಗೂಡು ಗ್ರಾ.ಪಂ.ಅಧ್ಯಕ್ಷ ಸಿದ್ಧೇಗೌಡ, ತಾ.ಪಂ.ಮಾಜಿ ಸದಸ್ಯ ದೊಡ್ಡಯ್ಯ, ರಾಜ್ಯ ಕುರುಬರ ಸಂಘದ ನಿರ್ಧೇಶಕ ಎಂ ಡಿ ಉಮೇಶ್, ಯುವ ಜೆಡಿಎಸ್ ಅಧ್ಯಕ್ಷ ಚಂದಹಳ್ಳಿ ಶ್ರೀಧರ್ ಶಿವಣ್ಣ, ಎಂ.ಎಚ್.ದೊಡ್ಡಯ್ಯ, ಸೇರಿದಂತೆ ಹಲವರು ಭಾಗಿಯಾಗಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ