ಮಳವಳ್ಳಿ : ದಲಿತ ವರ್ಗದ ಜನ ಅತಿ ಹೆಚ್ಚು ಸಂಖ್ಯೆಯಲ್ಲಿ ವಾಸವಿರುವ ಗ್ರಾಮಗಳಲ್ಲಿ ಪ್ರಮುಖವಾಗಿರುವ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಸುಮಾರು ೨೫ ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸು ವುದಾಗಿ ಶಾಸಕ ಡಾ, ಕೆ ಅನ್ನದಾನಿ ಹೇಳಿದ್ದಾರೆ.
ನೆಟ್ಕಲ್ ಗ್ರಾಮದಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕ್ಕೆ ಶಂಕುಸ್ಥಾಪನೆ ನೆರವೇರಿಸು ವುದರ ಜೊತೆಗೆ ಗ್ರಾಮದ ಎಲ್ಲಾ ಮನೆಗಳಿಗೆ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ೪೯ ಲಕ್ಷ ರೂ ವೆಚ್ಚದ ಜೆ ಜೆ ಎಂ ಯೋಜನೆಯ ಕಾಮಗಾರಿಗೆ ಸಹ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮಕ್ಕೆ ಅಂಬೇಡ್ಕರ್ ಭವನ ಇಲ್ಲ ಎಂಬ ಕೊರಗು ಈ ಗ್ರಾಮದ ಮುಖಂಡರು ಹಾಗೂ ಗ್ರಾಮದ ಯುವಕರ ಬಹಳ ವರ್ಷಗಳದಾಗಿತ್ತು ಎಂದರು.
ಚುನಾವಣೆ ಸಂದರ್ಭದಲ್ಲಿ ಈ ಗ್ರಾಮಕ್ಕೆ ಪ್ರಚಾರಕ್ಕೆ ಬಂದಿದ್ದ ವೇಳೆ ಅಂಬೇಡ್ಕರ್ ಭವನ ನಿರ್ಮಿಸಿ ಕೊಡುವ ಭರವಸೆ ನೀಡಿದ್ದೆ ಅದರಂತೆ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸದ್ಯ ೫ ಲಕ್ಷ ರೂ ಪ್ರಾರಂಭಿಕ ಅನುದಾನ ಬಿಡುಗಡೆ ಮಾಡಿದ್ದು ಸುಮಾರು ೨೫ ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಕೊಡುವ ಭರವಸೆ ನೀಡಿದರು.
ಇದರ ಜೊತೆಗೆ ಗ್ರಾಮದ ಎಲ್ಲಾ ೧೮೦ ಮನೆಗಳಿಗೂ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ೪೯ ಲಕ್ಷ ರೂ ವೆಚ್ಚದ ಕಾಮಗಾರಿಗೆ ಸಹ ಚಾಲನೆ ನೀಡಲಾಗಿದ್ದು ಗ್ರಾಮದ ಎಲ್ಲಾ ನಿವಾಸಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳುವಂತೆ ಕೋರಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ಎಲ್ ಚೇತನ್ ಕುಮಾರ್, ಗ್ರಾ ಪಂ ಸದಸ್ಯ ಸೋಮಶೇಖರ್, ನಾಗರಾಜು ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ