ಮಳವಳ್ಳಿ : ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತಿತರರು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಮಹಿಳೆಯರಿಗೆ ರಾಜ್ಯ ಮಹಿಳಾ ಆಯೋಗವು ರಕ್ಷಣೆ ನೀಡುವುದರ ಜೊತೆಗೆ ಸಮರ್ಪಕ ನ್ಯಾಯ ಒದಗಿಸಲು ಬದ್ದವಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್. ಪ್ರಮೀಳ ನಾಯ್ಡು ಹೇಳಿದ್ದಾರೆ.
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೋಷಣೆಗೆ ಒಳಗಾದ ಮಹಿಳೆಯರು ಧೈರ್ಯವಾಗಿ ಎದುರಿಸಬೇಕು, ನಿಮ್ಮ ಜೊತೆ ಪೊಲೀಸ್ ಇಲಾಖೆ ಮತ್ತು ಮಹಿಳಾ ಆಯೋಗ ಇರುತ್ತದೆ, ನಿಮ್ಮ ಹೆಸರು ಮತ್ತು ಹೇಳಿಕೆಯ ಗೌಪ್ಯತೆ ಕಾಪಾಡಿ ನ್ಯಾಯ ಒದಗಿಸಲಾಗುವುದು, ಕಾಮುಕರ ಅಟ್ಟಹಾಸವನ್ನು ಮೆಟ್ಟಿ ನಿಲ್ಲುವಂತಾಗಬೇಕೆAದು ತಿಳಿಸಿದರು.
ಮನೆಯ ಜವಾಬ್ದಾರಿಯನ್ನು ನಿರ್ವಹಿಸುವ ಮಹಿಳೆಯರು ಆರೋಗ್ಯದ ಕಡೆಗೂ ಗಮನ ನೀಡಬೇಕಿದೆ, ಗರ್ಭಿಣಿ ಮತ್ತು ಬಾಣಂತಿ ಸಮಯದಲ್ಲಿ ರಕ್ತ ಹೀನತೆ ಕಂಡುಬರುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಪೌಷ್ಠಿಕಾಂಶದ ಸಮತೋಲನ ಆಹಾರವನ್ನು ಸೇವಿಸಬೇಕೆಂದು ತಿಳಿಸಿದರು.
ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು ಕಠಿಣ ಶಿಕ್ಷೆಗೆ ಒಳಗಾಗುವಂತೆ ಕ್ರಮ ಕೈಗೊಳ್ಳಲಾಗಿದೆ, ಮಹಿಳೆಯರು ಪುರುಷರಿಗಿಂತ ಎರಡು ಪಟ್ಟು ಹೆಚ್ಚಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದರಿಂದ ಪುರುಷರಷ್ಟೆ ಎಲ್ಲಾ ಕ್ಷೇತ್ರಗಳಲ್ಲಿ ಶೇ, ೫೦ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.
ಶಾಸಕ ಡಾ. ಕೆ.ಅನ್ನದಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾಯಿ ಮಗು ಆರೋಗ್ಯವಾಗಿರುವ ಪೌಷ್ಠಿಕಾಂಶದ ಆಹಾರವನ್ನು ಸೇವಿಸಬೇಕು, ಪ್ರತಿನಿತ್ಯ ಸೇವಿಸುವ ಆಹಾರದಲ್ಲಿ ಯಾವ ಪೌಷ್ಟಿಕಾಂಶ ಇದೆ ಎನ್ನುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಮಹಿಳೆಯರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳ ಬೇಕೆಂದು ಹೇಳಿದರು.
ಇತ್ತಿಚಿನ ದಿನಗಳಲ್ಲಿ ಸೌಂದರ್ಯ ಹಾಳಾಗುತ್ತಿದೆ ಎನ್ನುವ ಕಾರಣಕ್ಕಾಗಿ ಮಹಿಳೆಯರು ಮಗುವಿಗೆ ಎದೆ ಹಾಲನ್ನು ಕುಡಿಸುವುದನ್ನೇ ಕಡಿಮೆ ಮಾಡಿದ್ದಾರೆ. ಇದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಹಲವು ರೋಗಗಳಿಗೆ ತುತ್ತಾಗುತ್ತಿವೆ.
ಮಾರುಕಟ್ಟೆಯಲ್ಲಿ ಸೌಂದರ್ಯ ವೃದ್ದಿಸುವಂತಹ ಔಷಧಿಗಳು ಮತ್ತು ಸೌಂದರ್ಯವರ್ಧಕಗಳು ಬಂದಿರುವುದರಿAದ ಸೌಂದರ್ಯ ಹಾಳಾಗುತ್ತದೆ ಎನ್ನುವ ಚಿಂತೆಯನ್ನು ಬಿಟ್ಟು ಮಗುವಿಗೆ ಎದೆ ಹಾಲನ್ನು ಕುಡಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಮಾಡಲಾಯಿತು. ಮಕ್ಕಳಿಗೆ ಪೌಷ್ಠಿಕಾಂಶದ ಆಹಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರಾಧ ನಾಗರಾಜು, ಉಪಾಧ್ಯಕ್ಷ ನಂದಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ಧೇಶಕ ರಾಜುಮೂರ್ತಿ, ಪುರಸಭೆ ಸದಸ್ಯ ಸಿದ್ದರಾಜು, ಪ್ರಮೀಳ, ವೇದಾವತಿ, ಸಿಡಿಪಿಓ ಕುಮಾರ್, ಎಸಿಡಿಪಿಓ ಮಹೇಶ್, ಮುಖಂಡರಾದ ದೊಡ್ಡಯ್ಯ, ಪೊತ್ತೆಂಡೆ ನಾಗರಾಜು ಅಂಗನವಾಡಿ ಮೆಲ್ವಿಚಾರಕರಾದ ಮಂಜುಳ, ಶೈಲಜಾ, ಮಹದೇವಪ್ಪ. ಶಿವಮ್ಮ,ಲತಾ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ