May 17, 2024

Bhavana Tv

Its Your Channel

ನಾಳೆ ಕನಕಭವನ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ

ಮಳವಳ್ಳಿ: ಮಳವಳ್ಳಿ ಪಟ್ಟಣಕ್ಕೆ ಸಮೀಪದ ಮೂಗನಕೊಪ್ಪಲು ಗ್ರಾಮದ ನಾಳೆ (ಅ.೩ರಂದು) ನಡೆಯುವ ಕನಕಭವನ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಹಾಲು ಮತ ಸಮಾಜದ ಜನರು ಪಕ್ಷಭೇಧ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಡಾ.ಕೆ.ಅನ್ನದಾನಿ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕುರುಬ ಸಮಾಜದ ಮುಖಂಡರ ಜತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದು ಕುರುಬ ಸಮಾಜ ವಿವಿಧ ಸ್ವಾಮೀಜಿಗಳು, ಸಚಿವರಾದ ಬೈರತಿ ಬಸವರಾಜು, ಎಂಟಿಬಿ ನಾಗರಾಜು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಎಚ್. ವಿಶ್ವನಾಥ್, ಬಂಡೆಪ್ಪ ಕಾಸೆಂಪುರ ಸೇರಿದಂತೆ ಹಲವಾರು ಶಾಸಕರು ಭಾಗಿಯಾಗಲಿದ್ದಾರೆ ಎಂದರು.
ಟಿಎಪಿಸಿಎAಎಸ್ ಹಾಗೂ ರಾಜ್ಯ ಕುರುಬರ ಸಂಘದ ನಿರ್ದೇಶಕ ರಾಜೇಶ್ ಮಾತನಾಡಿ, ಮಾಜಿ ಸಿ ಎಂ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದವು. ಅವರು ಕಾರ್ಯಕಮಕ್ಕೆ ಗೈರು ಆಗಲು ಸಾಕಷ್ಟು ಕಾರಣಗಳಿದ್ದು, ಆ ವಿಷಯವನ್ನು ಮುಂದಿನ ದಿನಗಳಲ್ಲಿ ಬಹಿರಂಗ ಪಡಿಸಲಾಗುವುದು. ಅದಕ್ಕೆ ಯಾರೂ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಶಾಸಕರ ಜತೆ ಸಮುದಾಯದ ಜನರು ಇದ್ದಾರೆ ಎಂದರು.
ತಾ.ಪA.ಮಾಜಿ ಸದಸ್ಯ ದೊಡ್ಡಯ್ಯ ಮಾತನಾಡಿ, ಹಿಂದೆ ಅಧಿಕಾರ ನಡೆಸಿದ್ದಂತಹ ನಾಯಕ ಮಾಡದ ಕೆಲಸವನ್ನು ನಮ್ಮ ಸಮಾಜಕ್ಕೆ ಶಾಸಕ ಡಾ.ಕೆ.ಅನ್ನದಾನಿ ಮಾಡುತ್ತಿದ್ದು, ಕ್ಷೇತ್ರದಲ್ಲಿ ಹಿಂದೆ ಯಾರೂ ಮಾಡದಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಾಲಿ ಶಾಸಕರು ಮಾಡುತ್ತಿದ್ದಾರೆ ಎಂದರು.
ಪುರಸಭೆ ಮಾಜಿ ಸದಸ್ಯ ಎಂ.ಎಚ್.ದೊಡ್ಡಯ್ಯ ಮಾತನಾಡಿ, ೧೯೮೩ರಿಂದಲೂ ನಮ್ಮ ಸಮಾಜದಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಾ ಬಂದಿದ್ದು, ಹಿಂದೆ ಅಧಿಕಾರದಲ್ಲಿದ್ದಂತಹವರು ಏಕೆ ಕನಕಭವನ ನಿರ್ಮಾಣಕ್ಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.
ಪುರಸಭೆ ಉಪಾಧ್ಯಕ್ಷ ಟಿ.ನಂದಕುಮಾರ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಬುಲೆಟ್ ನಿಂಗಣ್ಣ, ಮುಖಂಡರಾದ ಗುರುಸ್ವಾಮಿ, ಶ್ರೀಧರ್, ಮಲ್ಲೇಗೌಡ, ಸೋಮಶೇಖರ್ ಸೇರಿದಂತೆ ಹಲವರು ಇದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: