May 17, 2024

Bhavana Tv

Its Your Channel

ಪ್ರಗತಿಪರ ಸಂಘಟನೆಗಳ ಮುಖಂಡರಿOದ ಪ್ರತಿಭಟನೆ

ಮಳವಳ್ಳಿ:ಉತ್ತರ ಪ್ರದೇಶ ದಲ್ಲಿ ಚಳುವಳಿ ನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಪುತ್ರ ಕಾರು ಹರಿಸಿ ಎಂಟು ಮಂದಿ ರೈತರ ಸಾವಿಗೆ ಕಾರಣವಾಗಿರುವ ಘಟನೆ ಯನ್ನು ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಇಂದು ಪ್ರಗತಿಪರ ಸಂಘಟನೆ ಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಮಳವಳ್ಳಿ ಪೇಟೆ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಮುಖಂಡರು ಕೇಂದ್ರ ಸರ್ಕಾ ರ ಪ್ರಧಾನಿ ಹಾಗೂ ಕೇಂದ್ರ ಸಚಿವರ ವಿರುದ್ಧ ಘೋಷಣೆ ಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ, ಪ್ರಾಂತ ರೈತ ಸಂಘದ ಅಧ್ಯಕ್ಷ ಭರತ್ ರಾಜ್ ಅವರು ರೈತ ವರ್ಗಕ್ಕೆ ಮಾರಕವಾದ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕಳೆದ ಹತ್ತು ತಿಂಗಳಿAದ ದೆಹಲಿ, ಉತ್ತರ ಪ್ರದೇಶ, ಹರಿಯಾಣ ಸೇರಿದಂತೆ ವಿವಿಧೆಡೆ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟ ವನ್ನು ಹತ್ತಿಕ್ಕಲು ಕೇಂದ್ರದ ನರೇಂದ್ರಮೋದಿ ಸರ್ಕಾರದ ಜೊತೆ ಹರಿಯಾಣ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಹಾಗೂ ಆರ್ ಎಸ್ ಎಸ್ ಹಲವಾರು ಷಡ್ಯಂತ್ರ ನಡೆಸುತ್ತಿವೆ ಎಂದು ಆರೋಪಿಸಿದರು.
ಇದರ ಭಾಗವಾಗಿ ಉತ್ತರ ಪ್ರದೇಶದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಅವರ ಪುತ್ರ ಪ್ರತಿಭಟನಾ ನಿರತ ರೈತರ ಮೇಲೆ ಕಾರು ನುಗ್ಗಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು ಈ ಮೂಲಕ ಕೇಂದ್ರದ ಮೋದಿ ಸರ್ಕಾರ ತಮ್ಮದು ರೈತರ ಕೊಲೆಗಡುಕ ಸರ್ಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದು ಟೀಕಿಸಿದರು.
ಸಚಿವರ ಪುತ್ರನ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ ಅವರು ಕೂಡಲೇ ಈತನನ್ನು ಬಂಧಿಸಿ ಬೇಕು, ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು, ಮೃತಪಟ್ಟ ರೈತ ಕುಟುಂಬಕ್ಕೆ ತಲಾ ಒಂದು ಕೋಟಿ ರೂ ಪರಿಹಾರ ನೀಡಬೇಕು, ತಕ್ಷಣವೇ ಸಚಿವ ಅಜಯ್ ಮಿಶ್ರ ಅವರನ್ನು ಸಂಪುಟದಿAದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸುಶೀಲ, ಸುನೀತಾ, ತಿಮ್ಮೇಗೌಡ, ಸ್ವಾಮಿ, ಸೇರಿದಂತೆ ಹಲವಾರು ಪ್ರಮುಖ ರು ಪಾಲ್ಗೊಂಡಿದ್ದರು.

ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: