December 22, 2024

Bhavana Tv

Its Your Channel

ಮಳವಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ

ಮಳವಳ್ಳಿ : ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡುರುವುದರ ಜೊತೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲು ಹೊರಟಿದ್ದ ಕಾಂಗ್ರೆಸ್ ಪಕ್ಷದ ಯುವ ನಾಯಕಿ ಪ್ರಿಯಾಂಕ ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಿರುವ ಯುಪಿ ಸರ್ಕಾರದ ಕ್ರಮ ಖಂಡಿಸಿ ಮಳವಳ್ಳಿ ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ದಾರಿಯುದ್ದಕ್ಕೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಲ್ಲಿನ ಪೇಟೆ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾ ಕಾರರು ವೃತ್ತದ ಸುತ್ತ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಜೆ ದೇವರಾಜು ಅವರು ಕೇಂದ್ರ ಸಚಿವ ಅಜಯ್ ಮಿಶ್ರ ಅವರ ಬೆಂಗಾವಲು ಕಾರನ್ನು ಪ್ರತಿಭಟನಾ ನಿರತ ರೈತರ ಮೇಲೆ ಹರಿಸಿದ ಸಚಿವರ ಪುತ್ರ ನಾಲ್ವರು ರೈತರನ್ನು ಹತ್ಯೆ ಮಾಡಿ ಹಲವಾರು ರೈತರನ್ನು ಗಾಯಗೊಳಿಸುವ ಮೂಲಕ ಕೇಂದ್ರ ಹಾಗೂ ಯುಪಿ ಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತಮ್ಮದು ಕೊಲೆಗಡುಕ ಸರ್ಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದು ಆರೋಪಿಸಿ ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ಥ ರೈತರಿಗೆ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ಪಕ್ಷದ ಯುವ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ತಡೆದ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ ಬಂಧಿಸಿರುವ ಕ್ರಮವನ್ನು ತೀವ್ರವಾಗಿ ಖಂಡಿಸಿದ ದೇವರಾಜು ಕೂಡಲೇ ಪ್ರಿಯಾಂಕ ಅವರನ್ನು ಬಿಡುಗಡೆ ಗೊಳಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.
ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರ ಮೂಲಕ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ತಾ ಪಂ ಅಧ್ಯಕ್ಷರಾದ ಪುಟ್ಟಸ್ವಾಮಿ, ನಾಗೇಶ್, ವಿಶ್ವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಕುಳ್ಳ ಚೆನ್ನಂಕಯ್ಯ, ಪುರಸಭಾ ಸದಸ್ಯರಾದ ಶಿವು, ರಾಜಶೇಖರ, ಮುಖಂಡರಾದ ಬೋಸೇಗೌಡನದೊಡ್ಡಿ ಮಹದೇವು, ಕಿರಣ್ ಶಂಕರ್, ಕಾಂತರಾಜ್, ಮಾರ್ಕಾಲು ಮಾಧು, ಶಿವರಾಜ್ ನಾಯಕ್, ಶಿವಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: