May 17, 2024

Bhavana Tv

Its Your Channel

ವ್ಯಕ್ತಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಎಸಿಡ್ ಎರಚಿ ಬರ್ಬರವಾಗಿ ಹತ್ಯೆ

ಮಳವಳ್ಳಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಎಸಿಡ್ ಎರಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆಟೋ ಚಾಲಕ ಶ್ರೀನಿವಾಸ ಅಲಿಯಾಸ್ ಚೈನ್ ಶ್ರೀನ(೪೦) ಕೊಲೆಯಾದ ವ್ಯಕ್ತಿಯಾಗಿದ್ದು ಅನೈತಿಕ ಸಂಬAಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಪಟ್ಟಣದ ಗಂಗಾಮತ ಬೀದಿಯ ಸುಣ್ಣದಕೇರಿಯ ಬಳಿ ಇಂದು ಮುಂಜಾನೆ ೪.೩೦ ರ ಸಮಯದಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸ ಹೋಗುತ್ತಿದ್ದ ಸಂದರ್ಭದಲ್ಲಿ ಅಡ್ಡಿಗಟ್ಟಿದ ದುಷ್ಕರ್ಮಿಗಳು ಖಾರದಪುಡಿ ಎರಚಿ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಎಸಿಡ್ ಎರಚಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು, ಸದ್ಯದಲ್ಲಿಯೇ ಆರೋಪಿ ಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಬoಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: