ಮಳವಳ್ಳಿ : ರಾಮಾಯಣ ಮಹಾಕಾವ್ಯದ ಕರ್ತೃ ಹಾಗೂ ಸಪ್ತ ಋಷಿಗಳಲ್ಲಿ ಕವಿ ಶ್ರೇಷ್ಠರು ಎಂದೇ ಕರೆಯಲ್ಪಡುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಇಂದು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ಧೇಶಕರಾದ ಜನಾರ್ಧನ್ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ನೆರೆದಿದ್ದ ಅಧಿಕಾರಿಗಳು ಹಾಗೂ ಮುಖಂಡರು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ್ ಅವರು ವಿಶ್ವದ ಅತ್ಯಂತ ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿರುವ ರಾಮಾಯಣ ಮಹಾಕಾವ್ಯ ವನ್ನು ರಚಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದರು. ಇಂತಹ ಮಹಾನ್ ಶ್ರೇಷ್ಠ ಋಷಿಮುನಿಗಳ ತತ್ವ ಆದರ್ಶ ನಮಗೆಲ್ಲ ಮಾದರಿಯಾಗಲಿ ಎಂದು ಆಶಿಸಿದರು.
ಗ್ರೇಡ್ ೨ ತಹಸೀಲ್ದಾರ್ ಜಯರಾಮು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖಂಡರಾದ ಚಂದ್ರಪ್ಪ, ಬಸವರಾಜು, ಸಿಂಗಾರಿಗೌಡ ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ