December 22, 2024

Bhavana Tv

Its Your Channel

ಮಳವಳ್ಳಿ: ವ್ಯಕ್ತಿಯ ಅನುಮಾನಾಸ್ಪದ ಸಾವು

ಮಳವಳ್ಳಿ: ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಳಗವಾದಿಯ ಹೊಸರೋಡ್ ಬಳಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣದ ಹೊರವಲಯದ ಮಾರೇಹಳ್ಳಿಯ ನಿವಾಸಿ ಚಾಮಯ್ಯ ಅವರ ಮಗ ಎಂ.ಸಿ.ಚೇತನ್ ಕುಮಾರ್(೪೦) ಮೃತಪಟ್ಟ ವ್ಯಕ್ತಿಯಾಗಿದ್ದು, ಕಳೆದ ಆರು ತಿಂಗಳಿAದ ತಳಗವಾದಿ ಗೇಟ್(ಹೊಸರೋಡ್) ಬಳಿಯ ನಿಸರ್ಗ ಡಾಬಾದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಕುಡಿದ ಅಮಲಿನಲ್ಲಿ ಮೂತ್ರವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಚ್.ಲಕ್ಷ್ಮಿನಾರಾಯಣ ಪ್ರಸಾದ್, ಸಿಪಿಐ ಎ.ಕೆ.ರಾಜೇಶ್, ಎಎಸ್ ಐ ರವಿಕುಮಾರ್ ಭೇಟ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬAಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತರ ಸಹೋದರ ಸಾವಿಗೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: