ಮಳವಳ್ಳಿ : ಮಳವಳ್ಳಿ ಪಟ್ಟಣದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಅಗಲಿದ ಪುನೀತ್ ರಾಜ್ ಕುಮಾರ್ ಅವರಿಗೆ ಮೇಣದ ಬತ್ತಿಯನ್ನು ಹಿಡಿದು ನೂರಾರು ಅಭಿಮಾನಿಗಳು ಮೆರವಣಿಗೆ ನಡೆಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಅನಂತ ರಾಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಪ್ಪು ಅಮರ , ಅಪ್ಪು ಚಿರಾಯು ಎಂದು ಘೋಷಣೆ ಕೂಗಲಾಯಿತು.
ಇದೇ ವೇಳೆಯಲ್ಲಿ ಕ್ರೈಸ್ತ ಕುಲಬಾಂಧವರು ಪುನೀತ್ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥನೆ ಮಾಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕನ್ನಡ ಕಲಾಭಿಮಾನಿಗಳ ಸಂಘ, ಸೇರಿದಂತೆ ವಿವಿದ ಸಂಘಟನೆಗಳು ಪುನೀತ್ ಅಭಿಮಾನಿಗಳು ಭಾಗವಹಿಸಿದ್ದರು.
ವರದಿ :ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ