ಮಳವಳ್ಳಿ ; ಶಿಕ್ಷಣ ಎಂದರೆ ಕೇವಲ ಪುಸ್ತಕ ಜ್ಞಾನ ನೀಡುವುದಷ್ಟೇ ಅಲ್ಲದೆ ಮಕ್ಕಳ ಬದುಕು ಕಟ್ಟಿಕೊಡುವ ಶಿಕ್ಷಣ ನೀಡುವುದು ಅತ್ಯಗತ್ಯ ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳು ಮಾಡುತ್ತಿರುವುದರ ಫಲವಾಗಿ ತಾಲ್ಲೂಕಿನಲ್ಲಿ ೨೩೦೦ಕ್ಕೂ ಹೆಚ್ಚು ಮಕ್ಕಳು ಖಾಸಗಿ ಶಾಲೆಗಳನ್ನು ಬಿಟ್ಟು ಸರ್ಕಾರಿ ಶಾಲೆಗೆ ಸೇರ್ಪಡೆ ಗೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ತಿಳಿಸಿದ್ದಾರೆ.
ಪಟ್ಟಣ ಅಂಬೇಡ್ಕರ್ ಭವನದಲ್ಲಿ ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್ ಸೈನ್ಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಸರ್ಕಾರಿ ಶಾಲೆ ಉಳಿಸಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು ಕರೋನಾ ಸಂದರ್ಭದಲ್ಲಿ ಸಹ ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿದ್ದನ್ನು ಗಮನಿಸಿದ ಪೋಷಕರು ತಡವಾಗಿ ಯಾದರೂ ಎಚ್ಚೆತ್ತು ಖಾಸಗಿ ಶಿಕ್ಷಣದ ವ್ಯಾಮೋಹದಿಂದ ಹೊರಬಂದು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ ಎಂದು ಹೇಳಿದರು.
ತಾಲ್ಲೂಕು ಅಧ್ಯಕ್ಷ ಸಿದ್ದರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಎಂ ನಾಗೇಶ್ ಸಮಾಜ ಕಲ್ಯಾಣ ಕಚೇರಿ ಮ್ಯಾನೇಜರ್ ಚಂದ್ರಕಾOತ್, ಮಾಜಿ ಜಿ ಪಂ ಸದಸ್ಯರಾದ ಎಂ ಎನ್ ಜಯರಾಜು, ಬಂಡೂರು ಮಹದೇವಮ್ಮ, ರೇಷ್ಮೆಭಾನು, ರತ್ನಮ್ಮ, ಮುಂತಾದವರು ಹಾಜರಿದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ