ಮಳವಳ್ಳಿ : ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆಪಕ್ಕದ ಜಮೀನಿಗೆ ಉರುಳಿ ಬಿದ್ದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಹಳ್ಳಿ ಕ್ರಾಸ್ ಬಳಿಯ ಮಹದೇಶ್ವರ ದೇವಸ್ಥಾನದ ಬಳಿ ಜರುಗಿದೆ.
ಕೊಳ್ಳೇಗಾಲ ಪಟ್ಟಣದ ವಾಸಿ ೪೫ ವರ್ಷ ವಯಸ್ಸಿನ ನಾಗರತ್ನ ಎಂಬುವರೇ ಮೃತಪಟ್ಟ ದುರ್ದೈವಿ ಯಾಗಿದ್ದು ಈ ಕಾರಿನಲ್ಲಿದ್ದ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಈ ಕಾರು ನಿಯಂತ್ರಣ ತಪ್ಪಿ ರಸ್ತೆಪಕ್ಕದ ಜಮೀನಿಗೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಬೆಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಾಗರತ್ನಮ್ಮಳ ಶವವನ್ನು ಮಳವಳ್ಳಿ ಸಾರ್ವಜನಿಕ ಅಸ್ವತ್ರೆ ಯ ಶವಗಾರಕ್ಕೆ ಸಾಗಿಸಲಾಗಿದೆ
ಗಾಯಾಳು ವಿಜಯಕುಮಾರ್ ಅವರಿಗೆ ಕೊಳ್ಳೇಗಾಲ ಸಾರ್ವಜನಿಕ ಅಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಕೆ ಆರ್ ಆಸ್ವತ್ರೆಗೆ ಸೇರಿಸಲಾಗಿದೆ
ಈ ಸಂಬAದ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ