ಮಳವಳ್ಳಿ: ಜಿಲ್ಲೆಯ ಜನರನ್ನು ಎಂದಿಗೂ ಕೈಬಿಡುವ ಪ್ರಶ್ನೆಯೇ ಇಲ್ಲ, ನಿರಂತರವಾಗಿ ಮಂಡ್ಯ ಜನರ ಜೊತೆ ಇರುತ್ತೇನೆ. ಮಂಡ್ಯದಲ್ಲಿ ಮತ್ತೆ ಸ್ಪರ್ಧೆಗೆ ಪಕ್ಷದ ತೀರ್ಮಾನ ತೆಗೆದುಕೊಂಡರೆ ಸ್ಪರ್ಧಿಸುವೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಪಟ್ಟಣದ ಹೊರವಲಯದ ಮಾರೇಹಳ್ಳಿ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆ ಸಂಬAಧ ಆಯೋಜಿಸಿದ್ದ ಚೊಟ್ಟನಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂ.ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಲೋಕಸಭೆ ಚುನಾವಣೆಯ ಸೋಲಿನ ಬಗ್ಗೆ ಚರ್ಚೆ ಅನಗತ್ಯವಾಗಿದ್ದು, ನಮ್ಮ ಕುಟುಂಬವು ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಕಂಡಿದೆ. ದೇವೇಗೌಡರು, ಕುಮಾರಸ್ವಾಮಿ ಅವರು ಸೋತು ಗೆದ್ದಿದ್ದಾರೆ. ಯಾವುದೇ ವಿಚಾರಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕು. ಆ ಮೂಲಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಬೇಕು ಎಂದರು.
ಕಳೆದ ಲೋಕಸಭೆ ಚುನಾವಣೆ ನನಗೆ ಮೊದಲ ಸ್ಪರ್ಧೆಯಾಗಿತ್ತು. ಸಿ.ಎಸ್.ಪುಟ್ಟರಾಜು ಅವರು ೫.೨೫ ಲಕ್ಷ ಮತ ಪಡೆದಿದ್ದರು. ನಾನು ೫.೭೫ ಲಕ್ಷ ಮತ ಪಡೆದಿದ್ದೆ. ಆದರೆ ಬಿಜೆಪಿ, ಕಾಂಗ್ರೆಸ್, ರೈತಸಂಘ ಸೇರಿದಂತೆ ಹಲವರ ಕುತಂತ್ರ ರಾಜಕಾರಣದಿಂದ ಸೋಲಾಯಿತು. ಅದರ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಮತ್ತೆ ಅಪ್ಪಾಜಿಗೌಡರು ಸ್ಪರ್ಧೆ ಮಾಡಿದ್ದು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಎಲ್ಲರೂ ಒಮ್ಮತದಿಂದ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಶಾಸಕ ಡಾ.ಕೆ.ಅನ್ನದಾನಿ ನಾಗಮಂಗಲ ಶಾಸಕ ಸುರೇಶ್ ಗೌಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಕೃಷ್ಣ, ನಿರ್ದೇಶಕರಾದ ಎಚ್.ಟಿ.ಮಂಜು, ನೆಲ್ಲಿಗೆರೆ ಬಾಲು, ಜಿ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ರವಿ ಕಂಸಾಗರ, ಜೆಡಿಎಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮು, ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲೇಗೌಡ, ಅಪ್ಪಾಜಿಗೌಡರ ಪತ್ನಿ ಮಧುರಮಣಿ, ಮುಖಂಡರಾದ ಶ್ರೀಧರ್, ಸಿದ್ದಾಚಾಜಿ, ಶಂಕರೇಗೌಡ, ಸೋಮಣ್ಣ ಇದ್ದರು.
ವರದಿ: ಮಲ್ಲಿಕಾರ್ಜುನಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ