May 17, 2024

Bhavana Tv

Its Your Channel

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಮಂಜು ಪರ ಪ್ರಚಾರ ನಡೆಸಿದ ಸಚಿವ ನಾರಾಯಣ ಗೌಡ

ಮಳವಳ್ಳಿ : ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಭೇಟಿ ಮಾಡಿರುವುದಕ್ಕೆ ರಾಜಕೀಯ ಬಣ್ಣ ಬೆಳೆಯುತ್ತಿರುವ ಜೆಡಿಎಸ್ ಮುಖಂಡರು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಜೆಡಿಎಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸಿ ನಾರಾಯಣ ಗೌಡ ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
ಮಳವಳ್ಳಿ ಪಟ್ಟಣದ ರೈತ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿನ ಬಿಜೆಪಿ ಅಭ್ಯರ್ಥಿ ಬಿ ಸಿ ಮಂಜು ಅವರ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಸುಳ್ಳು ಹೇಳುವುದರಲ್ಲಿ ಜೆಡಿಎಸ್ ನಾಯಕರು ನಿಸ್ಸೀಮ ರಾಗಿದ್ದು ಅದಕ್ಕೆ ಮೋದಿ ಹಾಗೂ ದೇವೇಗೌಡರ ಭೇಟಿಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಹೊರಟಿರುವುದು ಸಾಕ್ಷಿಯಾಗಿದೆ ಎಂದು ಕಿಡಿ ಕಾರಿದರು.
ತಮ್ಮ ಸ್ವಂತ ಕಾರ್ಯಸಾಧನೆಗಾಗಿ ದೇವೇಗೌಡರು ಮೋದಿ ಅವರನ್ನಷ್ಟೇ ಅಲ್ಲದೆ ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವುದು ಮಾಮೂಲಿಯಾಗಿದ್ದು ಇದನ್ನೇ ಮುಂದುಮಾಡಿ
ಬಿಜೆಪಿ ಹೈಕಮಾಂಡ್ ಜೆಡಿಎಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು ಇಂತಹ ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿ ಅಭ್ಯರ್ಥಿಯಾದ ಬಿ ಸಿ ಮಂಜು ಅವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಅವರನ್ನು ಜಯಶೀಲ ರನ್ನಾಗಿ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಮಂಡ್ಯ ಜಿಲ್ಲೆಯನ್ನು ಕೇವಲ ತಮ್ಮ ಓಟ ಬ್ಯಾಂಕ್ ಮಾಡಿ ಕೊಂಡಿರುವ ಜೆಡಿಎಸ್ ನಾಯಕರು ಅಭಿವೃದ್ಧಿ ಅನುಮಾನಗಳನ್ನು ಹಾಸನ ರಾಮನಗರಕ್ಕೆ ಮಾತ್ರ ಬಳಸಿ ಆ ಜಿಲ್ಲೆಗಳನ್ನು ಮಾತ್ರ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ದೂರಿದ ಸಚಿವರು ಮಂಡ್ಯ ಜಿಲ್ಲೆಗೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅವರ ಕಾಲದಲ್ಲಿ ನಮ್ಮ ಸರ್ಕಾರ ಮಂಡ್ಯ ಜಿಲ್ಲೆಗೆ ಮೂರು ಸಾವಿರ ಕೋಟಿ ಅನುದಾನ ನೀಡಿದೆ, ಮನೆ ಮನೆಗೂ ಕೊಳಾಯಿ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ಜೆಜೆಎಂ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ ಬಿಡುಗಡೆ ಮಾಡಿದೆ ಆದರೆ ಈ ಕ್ಷೇತ್ರದ ಶಾಸಕರು ಇದು ಕುಮಾರ ಸ್ವಾಮಿ ಅವರು ಜಿಲ್ಲೆಗೆ ನೀಡಿದ ಕೊಡುಗೆ ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಶಾಸಕ ಅನ್ನದಾನಿ ಅವರ ವಿರುದ್ಧ ಹರಿಹಾಯ್ದರು.
ಕಾರ್ಯಕ್ರಮ ದಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಮಂಜು, ಮಾಜಿ ಸಚಿವ ಬಿ ಸೋಮಶೇಖರ್, ಮುಖಂಡರಾದ ಸಿದ್ದರಾಮಯ್ಯ, ಹೆಚ್ ಆರ್ ಅಶೋಕ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೃಷ್ಣ, ಯಮದೂರು ಸಿದ್ದರಾಜು, ಮತ್ತಿತರರು ಹಾಜರಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: