ಮಳವಳ್ಳಿ : ನಾಡಿದ್ದು ಮಂಡ್ಯ ಜಿಲ್ಲೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಬಿ ಜೆ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ ಸಿ ಮಂಜು ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡುವಂತೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಜೋಗಿಗೌಡ ಉಪಾಧ್ಯಕ್ಷರಾದ ಯಮದೂರು ಸಿದ್ದರಾಜು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಜಿಲ್ಲೆಯ ಹಲವಾರು ಜ್ವಲಂತ ಸಮಸ್ಯೆಗಳು ಪರಿಹಾರಗೊಂಡು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಕಾಣಬೇಕಾದರೆ ಈ ಭಾರಿ ವಿಧಾನ ಪರಿಷತ್‌ಗೆ ಬಿಜೆಪಿಯ ಅಭ್ಯರ್ಥಿಯಾದ ಬಿ ಸಿ ಮಂಜು ಅವರ ಆಯ್ಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು.
ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಬಿ ಜೆ ಪಿ ಸರ್ಕಾರ ಅಧಿಕಾರದಲ್ಲಿದ್ದು ಇದೇ ಪಕ್ಷದ ಅಭ್ಯರ್ಥಿ ಜಿಲ್ಲೆಯಿಂದ ಆಯ್ಕೆಯಾದರೆ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ಸಹಕಾರ ದೊರೆಯಲಿದೆ. ಬಿ ಜೆ ಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ ನೆನೆಗುದಿಗೆ ಬಿದ್ದಿದ್ದ ಪಾಂಡವಪುರ ಸಕ್ಕರೆ ಕಾರ್ಖಾನೆ ಚಾಲನೆ ಗೊಂಡಿದ್ದು ಮೈಷುಗರ್ ಕಾರ್ಖಾನೆ ಆರಂಭಕ್ಕೆ ಸಹ ನಿರ್ಧಾರ ಕೈಗೊಳ್ಳಲಾಗಿದೆ ಇಂತಹ ರೈತರಿಗೆ ಸಂಬoಧಿಸಿದ ಹಲವಾರು ಜ್ವಲಂತ ಸಮಸೈ ಗಳಿಗೆ ಪರಿಹಾರ ಸಿಗುವುದರ ಜೊತೆಗೆ ಗ್ರಾ ಪಂ ಗಳ ಹಲವಾರು ಸಮಸ್ಯೆಗಳಿಗೆ ಬಿ ಸಿ ಮಂಜು ದನಿಯಾಗಲಿದ್ದಾರೆ ಎಂದು ತಿಳಿಸಿದರು.ಮುಖಂಡರಾದ ಜವರೇಗೌಡ, ತಾಲ್ಲೂಕು ಅಧ್ಯಕ್ಷರಾದ ದೇವರಾಜು, ರಾಜಣ್ಣ, ಕೃಷ್ಣಪ್ಪ, ಶಶಿಕುಮಾರ್ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ