December 20, 2024

Bhavana Tv

Its Your Channel

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿರವರ ಹುಟ್ಟು ಹಬ್ಬ ಸರಳವಾಗಿ ಆಚರಿಸಿದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು

ಮಳವಳ್ಳಿ ; ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ೬೩ನೇ ಹುಟ್ಟು ಹಬ್ಬವನ್ನು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಇಂದು ಸರಳವಾಗಿ ಆಚರಿಸಿದರು.


ಪುರಸಭೆಯ ಉಪಾಧ್ಯಕ್ಷ ಟಿ ನಂದಕುಮಾರ್ ನೇತೃತ್ವದಲ್ಲಿ ಪಟ್ಟಣದ ಕೋಟೆ ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಕುಮಾರಸ್ವಾಮಿ ಅವರಿಗೆ ಶುಭ ಕೋರಿ ವಿಶೇಷ ಪೂಜೆ ಸಲ್ಲಿಸಿದ ಮುಖಂಡರು ನಂತರ ಇಲ್ಲಿನ ಪೇಟೆ ವೃತ್ತದಲ್ಲಿ ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಪರಸ್ಪರ ಸಿಹಿ ಹಂಚುವ ಮೂಲಕ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆಯ ಉಪಾಧ್ಯಕ್ಷ ಟಿ ನಂದಕುಮಾರ್ ಅವರು ಎರಡು ಬಾರಿ ಮುಖ್ಯ ಮಂತ್ರಿಯಾಗಿ ಅಲ್ಪ ಅವಧಿಯಲ್ಲೇ ಅತ್ಯುತ್ತಮ ಜನಪರ ಆಡಳಿತ ನೀಡುವ ಮೂಲಕ
ಜನಾನುರಾಗಿಯಾಗಿರುವ ಕುಮಾರಸ್ವಾಮಿ ಅವರಿಗೆ ಆರೋಗ್ಯದ ಜೊತೆಗೆ ಮುಂದಿನ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಯಾಗಿ ಮತ್ತೊಮ್ಮೆ ಈ ರಾಜ್ಯಕ್ಕೆ ಜನಪರ ರೈತ ಪರವಾದ ಆಡಳಿತ ನೀಡುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇಗೌಡ, ಪುರಸಭಾಧ್ಯಕ್ಷೆ ರಾಧ ನಾಗರಾಜು. ಮಾಜಿ ಜಿ ಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ ರವಿ, ಪುರಸಭಾ ಸದಸ್ಯರಾದ ಪ್ರಶಾಂತ್, ನಾಗೇಶ್, ನೂರುಲ್ಲಾ, ಮುಖಂಡರಾದ ಪೊತಂಡೆ ನಾಗರಾಜು, ಅಂಕನಾಥ್ , ನಾರಾಯಣ, ಮೆಡಿಕಲ್ ಕುಮಾರ್, ಮೆಹಬೂಬ್ ಪಾಷಾ, ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: