December 22, 2024

Bhavana Tv

Its Your Channel

ಮತ ಎಣಿಕೆಯ ವೇಳೆ ನನಗೆ ಬಿದ್ದಿದ್ದ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ಅಧಿಕಾರಿಗಳು ವರ್ಗಾಹಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ -ಎಂ.ಜಿ.ದಿನೇಶ್ ಗೂಳಿಗೌಡ

ಮಳವಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಎಣಿಕೆಯ ವೇಳೆ ನನಗೆ ಬಿದ್ದಿದ್ದ ಸುಮಾರು ೫೦ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ಅಧಿಕಾರಿಗಳು ವರ್ಗಾಹಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವಿಧಾನ ಪರಿಷತ್‌ನ ನೂತನ ಸದಸ್ಯ ಎಂ.ಜಿ.ದಿನೇಶ್ ಗೂಳಿಗೌಡ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಮತ ಎಣಿಕೆ ದಿನ ಎಣಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜೆಡಿಎಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದು, ನನಗೆ ಬಂದಿದ್ದ ಸುಮಾರು ೫೦ ಮತಗಳು ಅಧಿಕಾರಿಗಳ ಲೋಪದಿಂದ ಜೆಡಿಎಸ್ ಅಭ್ಯರ್ಥಿಯ ಲೆಕ್ಕಕ್ಕೆ ಸೇರಿವೆ. ದಾಖಲೆಗಳೊಂದಿಗೆ ಚುನಾವಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ದೂರು ನೀಡಲಾಗಿದೆ. ಇದರ ಬಗ್ಗೆ ಅವರ ಗಮನಕ್ಕೆ ಬಂದಿದ್ದು, ಇನ್ನೆರಡು ದಿನಗಳಲ್ಲಿ ಸರಿಪಡಿಸುವ ಭರವಸೆಯನ್ನು ನೀಡಿದ್ದಾರೆ. ನನ್ನ ಗೆಲುವಿನ ಅಂತರ ಇನ್ನೂ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆಯಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಸಾರಥಿಯಂತೆ ನಿಂತು ಇಡೀ ಜಿಲ್ಲೆಯಲ್ಲಿ ಕಾರ್ಯತಂತ್ರ ರೂಪಿಸಿ ಕೆಲಸ ಮಾಡಿರುವ ಮಾಜಿ ಸಚಿವ ಪಿ.ಎಂ.ನರೇoದ್ರಸ್ವಾಮಿ ಅವರ ಪಾತ್ರ ನನ್ನ ಗೆಲುವಿನಲ್ಲಿ ಮಹತ್ವದಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ವಾಸ್ತವ್ಯ ಮಾಡಲಿದ್ದು, ಯಾವ ಪಂಚಾಯಿತಿ ಎಂಬುವುದನ್ನು ಅವರೇ ನಿರ್ಧರಿಸಲಿದ್ದಾರೆ. ಜನವರಿ ೫ರ ಬಳಿಕ ನನ್ನ ಕಾರ್ಯತಂತ್ರ ಪ್ರಾರಂಭವಾಗಲಿದೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕಾರ್ಯನಿರ್ವಹಿಸುವೆ ಎಂದರು.
ನನ್ನ ಗೆಲುವಿನಲ್ಲಿ ಮೂಕ್ಕಾಲು ಭಾಗದ ಪಾಲು ನರೇಂದ್ರಸ್ವಾಮಿ ಅವರದು ಇದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಋಣವನ್ನು ಅಭಿವೃದ್ಧಿಯ ಮೂಲಕ ತೀರಿಸುವೆ. ನಮ್ಮ ನಾಯಕರ ಜೊತೆ ಚರ್ಚಿಸಿ ಜಿಲ್ಲೆಯ ಅಭಿವೃದ್ಧಿಯ ನೀಲನಕ್ಷೆಯನ್ನು ತಯಾರಿಸಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಾರಕೊಮ್ಮೆ ಭೇಟಿ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.

ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪಿ.ಎಂ.ನರೇoದ್ರಸ್ವಾಮಿ ಅವರ ಜೊತೆ ಚರ್ಚಿಸಿ ವಿಧಾನಪರಿಷತ್ ನಲ್ಲಿ ಸರ್ಕಾರದ ಗಮನ ಸೆಳೆದು ಅನುದಾನ ಬಿಡುಗಡೆಗೆ ಶ್ರಮಿಸಲಾಗುವುದು. ನನಗೆ ತಾಲ್ಲೂಕಿನಲ್ಲಿ ಅತಿಹೆಚ್ಚು ಮತಗಳ ಬಂದಿವೆ ಎಂದರು.
ಮಾಜಿ ಸಚಿವ ಪಿ.ಎಂ.ನರೇAದ್ರಸ್ವಾಮಿ ಮಾತನಾಡಿ, ಈ ಚುನಾವಣೆಯಲ್ಲಿ ಜನಾಭಿಪ್ರಾಯವನ್ನು ಕಾಂಗ್ರೆಸ್ ನತ್ತ ಸೆಳೆಯುವಲ್ಲಿ ನಾವು ಯಶ್ವಸಿಯಾಗಿದ್ದು, ಬೇರೆಯವರ ಹೇಳಿಕೆಗಳಿಗೆ ಉತ್ತರ ಕೊಡುವುದಿಲ್ಲ.
ವಿಧಾನಸಭೆ ಚುನಾವಣೆಯಲ್ಲಿ ದಿಕ್ಸೂಚಿ ಮಾಡುವುದು ಜನರಿಗೆ ಬಿಟ್ಟ ವಿಷಯ. ಕೆಲವರು ತಪ್ಪು ಕಲ್ಪನೆಯಲ್ಲಿದ್ದು, ನಮ್ಮ ಪಕ್ಷದ ಬಗ್ಗೆ ಬಹಳ ಕೀಳಾಗಿ ತಿಳಿದುಕೊಂಡವರಿಗೆ ಸಹಕಾರ ಕ್ಷೇತ್ರಗಳ, ಪಂಚಾಯಿತಿಗಳ ಹಾಗೂ ಪರಿಷತ್ ಚುನಾವಣೆಯಲ್ಲಿ ಜನರಿಂದ ಉತ್ತರ ಸಿಕ್ಕಿದೆ. ನಮ್ಮ ಬೇಡಿಕೆಗಳನ್ನು ಹಂತ-ಹAತವಾಗಿ ಜನರು ಈಡೇರಿಸುತ್ತಾ ಬರುತ್ತಿದ್ದಾರೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಯಾರೂ ಸೂಕ್ತ ಎಂಬುವುದನ್ನು ಜನರೇ ನಿರ್ಧರಿಸಲಿದ್ದು, ನಮ್ಮ ಮುಂದಿನ ಯೋಜನೆಗಳು ಹಾಗೂ ನಡೆಗಳ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಮುಂದಾಗುವುದಾಗಿ ತಿಳಿಸಿದರು.
ಈ ಸಂದಭ್ದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಅಜ್ಜಹಳ್ಳಿ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಜೆ.ದೇವರಾಜು, ಎಸ್.ಪಿ.ಸುಂದರ್ ರಾಜ್, ಜಿ.ಪಂ.ಮಾಜಿ ಸದಸ್ಯರಾದ ಸುಜಾತಾ ಕೆ.ಎಂ.ಪುಟ್ಟು, ಚಂದ್ರಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಕುಳ್ಳಚನ್ನಂಕಯ್ಯ, ಯುವ ಘಟಕದ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ ಸೇರಿದಂತೆ ಹಲವರು ಇದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: