December 22, 2024

Bhavana Tv

Its Your Channel

ಕಾಂಗ್ರೆಸ್ ಪಕ್ಷ ಮಾತ್ರ ದಲಿತ ಹಾಗೂ ಶೋಷಿತ ಸಮುದಾಯಗಳ ಹಿತರಕ್ಷಣೆ ಕಾಯುವ ಏಕೈಕ ಪಕ್ಷ- ಸುರೇಶ್ ಕಂಠಿ

ಮಳವಳ್ಳಿ : ಕಾಂಗ್ರೆಸ್ ಪಕ್ಷ ಮಾತ್ರ ದಲಿತ ಹಾಗೂ ಶೋಷಿತ ಸಮುದಾಯಗಳ ಹಿತರಕ್ಷಣೆ ಕಾಯುವ ಏಕೈಕ ಪಕ್ಷವಾಗಿದ್ದು ಈ ಕಾರಣದಿಂದ ದಲಿತ ಹಾಗೂ ಶೋಷಿತ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬಿ ಮತ್ತೊಮ್ಮೆ ಈ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗ ಬೇಕೆಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ಸುರೇಶ್ ಕಂಠಿ ಕರೆ ನೀಡಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಮಳವಳ್ಳಿಗೆ ಆಗಮಿಸಿ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಕುರಿತ ಪೂರ್ವ ಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶಗಳ ಕಾರ್ಯಕ್ರಮದ ಮೂಲಕ ದಲಿತ ಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಕ ಕೊಡುಗೆ ನೀಡಿದ್ದನ್ನು ಶೋಷಿತ ಸಮಯದಾಯ ಎಂದಿಗೂ ಮರೆಯುವಂತಿಲ್ಲ ಎಂದು ಹೇಳಿದರು.
ದೇಶದಲ್ಲಿ ದಲಿತ ಸಮುದಾಯ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ರಕ್ಷಣೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದ ಅವರು ಈ ಕಾರಣ ದಿಂದ ಶಿವಪುರದ ಸತ್ಯಾಗ್ರಹ ಸೌಧದಲ್ಲಿ ನಡೆಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮ ಹಾಗೂ ಮೇಕೆದಾಟು ಯೋಜನೆ ಕುರಿತು ಪಾದಯಾತ್ರೆ ಕಾರ್ಯಕ್ರಮ ಗಳಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವರ್ಗಗಳ ವಿಭಾಗದ ಎಲ್ಲಾ ಮುಖಂಡರು ಕಾರ್ಯಕರ್ತರು ಹಾಗೂ ಎಲ್ಲಾ ಶೋಷಿತ ಸಮುದಾಯಗಳ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷಕ್ಕೆ ಬಲ ತುಂಬ ಬೇಕೆಂದು ಕೋರಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ವಿಭಾಗದ ತಾಲ್ಲೂಕು ಅಧ್ಯಕ್ಷರಾದ ಶಾಂತರಾಜು ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಮಂಡ್ಯ ನಗರ ಸಭೆಯ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾ ಸಮಿತಿ ಮುಖಂಡರಾದ ದೀಪಕ್ ಕುಮಾರ್, ಲವ, ಮಹಾದೇವ ಪ್ರಸಾದ್ , ಜಿ ಪಂ ಮಾಜಿ ಸದಸ್ಯ, ಎಂ ಎನ್ ಜಯರಾಜು, ಪುರಸಭಾ ಸದಸ್ಯ ರಾಜಶೇಖರ್, ತಾ ಪಂ ಮಾಜಿ ಉಪಾಧ್ಯಕ್ಷ ಮಾರ್ಕಾಲು ಮಾಧು, ಕಿರಣ್ ಶಂಕರ್, ಟಿಎಪಿಸಿಎಂಎಸ್ ನಿರ್ಧೇಶಕ ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಕಂಠಿ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.

error: