May 16, 2024

Bhavana Tv

Its Your Channel

ಜನವರಿ 9ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ

ಮಳವಳ್ಳಿ : ಮೇಕೆದಾಟು ಯೋಜನೆ ಜಾರಿಗೊಳಿಸುವಲ್ಲಿ ತಾತ್ಸಾರ ಧೋರಣೆ ತೋರುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಜನವರಿ 9 ರಂದ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಂಡ್ಯ ಜಿಲ್ಲೆಯಿಂದ ಹತ್ತು ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಪಿ ಎಂ ನರೇಂದ್ರ ಸ್ವಾಮಿ ಹೇಳಿದ್ದಾರೆ .
ಮಳವಳ್ಳಿ ಪಟ್ಟಣದ ರೈತ ಭವನದಲ್ಲಿ ಆಯೋಜಿಸಲಾಗಿದ್ದ ಮೇಕೆದಾಟು ಪಾದಯಾತ್ರೆ ಕುರಿತ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಸುಮಾರು ಎರಡುವರೆ ಕೋಟಿ ಜನರಿಗೆ ಕುಡಿಯುವ ನೀರು ಒದಗಿಸುವ ಅದರಲ್ಲೂ ಬೆಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ಈ ಯೋಜನೆ ಜಾರಿಗೆ ಯಾವುದೇ ಅಡೆತಡೆ ಇಲ್ಲವಾದರೂ ಸಹ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ವಿಳಂಬ ಧೋರಣೆ ತೋರುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಯನ್ನು ಕುಂಠಿತಗೊಳಿಸುವ ಹುನ್ನಾರ ನಡೆಸಿವೆ ಎಂದು ಆರೋಪಿಸಿದರು.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಈ ಬೃಹತ್ ಪಾದಯಾತ್ರೆಯನ್ನು ನಡೆಸಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಲಾಗುತ್ತಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.
ಪಾದಯಾತ್ರೆ ಆರಂಭದ ದಿನದಿಂದ ಒಂದೊAದು ದಿನ ಒಂದೊAದು ಜಿಲ್ಲೆ ಯವರು ಪಾಲ್ಗೊಳ್ಳುತ್ತಿದ್ದು 5 ನೇ ದಿನ ಮಂಡ್ಯ ಜಿಲ್ಲೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳು ತ್ತಿದ್ದು ಅಂದು ಕನಿಷ್ಠ ಹತ್ತು ಸಾವಿರ ಮಂದಿ ಕಾರ್ಯಕರ್ತರು ಜಿಲ್ಲೆಯಿಂದ ಭಾಗವಹಿಸಬೇಕಿದ್ದು ಮಳವಳ್ಳಿ ಕ್ಷೇತ್ರದಿಂದಲೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಹಾಗೂ ಎಲ್ಲಾ ಸಾರ್ವಜನಿಕರು ಪಕ್ಷಾತೀತ ವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳ ಬೇಕೆಂದು ಕೋರಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಸುಂದರ್ ರಾಜ್, ಟಿಎಪಿಸಿಎಂಎಸ್ ಅಧ್ಯಕ್ಷ ಕುಳ್ಳ ಚೆನ್ನಂಕಯ್ಯ, ಮಾಜಿ ತಾ ಪಂ ಅಧ್ಯಕ್ಷ ರಾದ ಪುಟ್ಟಸ್ವಾಮಿ, ವಿಶ್ವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: