ಮಳವಳ್ಳಿ: ಮಹಾತ್ಮ ಗಾಂಧೀಜಿ ಅವರ ಗ್ರಾಮ ರಾಜ್ಯದ ಪರಿಕಲ್ಪನೆಯ ಕನಸಿನ ಕೂಸು ರಾಷ್ಟ್ರೀಯ ಸೇವಾ ಯೋಜನೆಯಾಗಿದ್ದು, ಈ ಮೂಲಕ ಕಾಲೇಜು ವಿದ್ಯಾರ್ಥಿಗಳಲ್ಲಿ ಶ್ರಮ, ಸಮಯಪ್ರಜ್ಞೆ, ಸೇವಾ ಮನೋಭಾವ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು.
ತಾಲ್ಲೂಕಿನ ಕಿರುಗಾವಲು ಹೋಬಳಿಯ ದೇಶವಳ್ಳಿ ಗ್ರಾಮದಲ್ಲಿ ಪಟ್ಟಣದ ಶಾಂತಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಆಯೋಜಿಸಿದ್ದ ಅಮೃತ ಮಹೋತ್ಸವ 75 ಮತ್ತು ಸಮುದಾಯ ಅಭಿವೃದ್ಧಿ ಯೋಜನೆಯಡಿ ಎನ್ ಎಸ್ ಎಸ್ 38ನೇ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದು ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡುತ್ತವೆ. ಇಲ್ಲಿನ ಅನುಭವಗಳನ್ನು ವಿದ್ಯಾರ್ಥಿಗಳು ಮುಂದಿನ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು
ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಂತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎಚ್.ಕೆAಪಯ್ಯ ವಹಿಸಿದರು.
ಈ ಸಂದರ್ಭದಲ್ಲಿ ಬೆಂಡರವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್. ಗ್ರಾ.ಪಂ.ಉಪಾಧ್ಯಕ್ಷೆ ಶ್ರುತಿ ಕುಮಾರ್, ಸದಸ್ಯೆ ಸಾವಿತ್ರಮ್ಮ, ಎನ್ ಎಸ್ ಎಸ್ ಘಟಕಾಧಿಕಾರಿಗಳಾದ ಸಿದ್ದರಾಜು, ಮಧು, ಉಪನ್ಯಾಸಕರಾದ ಕಾವ್ಯ, ಚಂದ್ರು, ಹರಿಶೇಖರ್, ರಾಘವೇಂದ್ರ, ಉಮೇಶ್, ಮುಖಂಡರಾದ ಮಲ್ಲೇಗೌಡ, ಶಂಕರೇಗೌಡ, ಶಿವಲಿಂಗೇಗೌಡ ಸೇರಿದಂತೆ ಹಲವರು ಇದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ