ಮಳವಳ್ಳಿ ; ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ವಾಗಿ ಗಾಯಗೊಂಡ ವ್ಯಕ್ತಿ ಯೋರ್ವ ಸಾವನ್ನಪ್ಪಿರುವ ಘಟನೆಯೊಂದು ಮಳವಳ್ಳಿ ಪಟ್ಟಣದ ಹೊರವಲಯದ ದೊಡ್ಡಕೆರೆ ಬಳಿ ಜರುಗಿದೆ.
ತಾಲ್ಲೂಕಿನ ರಾವಣಿ ಗ್ರಾಮದ ನಿವಾಸಿ ಸುನಿಲ್ ಅಲಿಯಾಸ್ ಗುಂಡ ಎಂಬಾತನೇ ಮೃತಪಟ್ಟ ದುರ್ದೈಯಾಗಿದ್ದು ಈತ ಖಾಸಗಿ ಬಸ್‌ವೊಂದರ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ಗೊತ್ತಾಗಿದೆ.
ನಿನ್ನೆ ಸಾಯಂಕಾಲ 4 ಗಂಟೆ ಸಮಯದಲ್ಲಿ ಮಳವಳ್ಳಿ ಮದ್ದೂರು ಮುಖ್ಯ ರಸ್ತೆಯ ದೊಡ್ಡಕೆರೆ ಬಳಿ ನಡೆದುಕೊಂಡು ಹೋಗುತ್ತಿದ್ದ ಈತನಿಗೆ ಹಿಂದಿನಿAದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಚಾಲಕ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡು ಒದ್ದಾಡುತ್ತಿದ್ದ ಈತನನ್ನು ಕೂಡಲೇ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಸಾವನ್ನಪ್ಪಿದ್ದಾನೆ.
ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ