ಮಳವಳ್ಳಿ : ಹಣದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆಯೊಂದು ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದಲ್ಲಿ ಜರುಗಿದೆ.
ಈ ಗ್ರಾಮದ ಲೇಟ್ ಬಸವಯ್ಯ ಎಂಬುವರ ಮಗನಾದ ಬಸವರಾಜು ಎಂಬಾತನೇ ಚಾಕು ಇರಿತದಿಂದ ಗಾಯಗೊಂಡ ಯುವಕನಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಈತನನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ.
ಇದೇ ಗ್ರಾಮದ ನವೀನ ಹಾಗೂ ಇತರರು ಸೇರಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು ಹಣಕಾಸಿನ ವಿಚಾರವಾಗಿ ಇಂದು ಬೆಳಿಗ್ಗೆ 7.30 ರ ಸಮಯದಲ್ಲಿ ಗ್ರಾಮದ ಹೊರವಲಯದಲ್ಲಿ ಇಬ್ಬರ ನಡುವೆ ಜಗಳ ಉಂಟಾಗಿ ಈ ವೇಳೆ ನವೀನ ಹಾಗೂ ಇತರರು ಸೇರಿ ಬಸವರಾಜ ವಿನ ಹೊಟ್ಟೆ ಎದೆಯ ಭಾಗದ ಐದಾರು ಕಡೆ ಚಾಕುವಿನಿಂದ ಇರಿದು ಪರಾರಿ ಯಾದರೆಂದು ದೂರಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಸವರಾಜುರನ್ನು ಕೂಡಲೇ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬAಧ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ