ಮಳವಳ್ಳಿ: ತಾಲ್ಲೂಕಿನ ಸುಣ್ಣದದೊಡ್ಡಿ ಗ್ರಾಮದಲ್ಲಿ ಬುಧವಾರ ಸಂಜೆ ಏಳು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ.
ಸುಣ್ಣದದೊಡ್ಡಿ, ಗಾಜನೂರು ಸೇರಿದಂತೆ ಹಲವು ಗ್ರಾಮಗಳ ಸುತ್ತಲಿನ ಗುಡ್ಡಗಳಲ್ಲಿ ಸಾಕಷ್ಟು ಬಾರಿ ಚಿರತೆಗಳು ಕಾಣಿಸಿಕೊಂಡ ಆತಂಕ ಮೂಡಿಸಿದ್ದವು. ಇತ್ತೀಚಿನ ದಿನಗಳಲ್ಲಿ ಈ ಭಾಗದ ಗ್ರಾಮಗಳಿಗೆ ನುಗ್ಗಿ ಸಾಕುಪ್ರಾಣಿಗಳನ್ನು ಹೊತ್ತೊಯ್ಯುವ ಪ್ರಕರಣಗಳು ಹೆಚ್ಚಾಗಿತ್ತು. ಗ್ರಾಮಗಳ ಆಸುಪಾಸಿನಲ್ಲಿ ಕಾಣಿಸಿಕೊಂಡಿದ್ದರಿAದ ರೈತರಲ್ಲಿ ಆತಂಕ ಹೆಚ್ಚಿತ್ತು. ಹೀಗಾಗಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಜನರು ಮನವಿ ಮಾಡಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನು ಇರಿಸಿದ್ದರು.
ಬುಧವಾರ ಸಂಜೆ 7 ರ ಸಮಯದಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಸೆರೆಯಾದ ಚಿರತೆಯನ್ನು ಸ್ಥಳಾಂತರಿಸಿದ್ದು, ಗುರುವಾರ ಕಾಡಿಗೆ ಬಿಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಆಸೀಫ್ ಅಹಮದ್, ಅರಣ್ಯಾಧಿಕಾರಿ ಶಿವರಾಜ್, ಅರಣ್ಯ ರಕ್ಷಕಿ ಸೌಮ್ಯಾ ಪಾಲ್ಗೊಂಡಿದ್ದರು.
ವರದಿ:-ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ