December 22, 2024

Bhavana Tv

Its Your Channel

ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರ ಪ್ರತಿಭಟನಾ ಮೆರವಣಿಗೆ

ಮಳವಳ್ಳಿ : ರಾಯಚೂರು ಜಿಲ್ಲಾ ನ್ಯಾಯಾಲಯದ ಆವಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದ ವೇಳೆ ಅಂಬೇಡ್ಕರ್ ಭಾವಚಿತ್ರವನ್ನು ತೆಗೆದು ಹಾಕಿಸುವ ಮೂಲಕ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿರುವ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ನ್ಯಾಯಾಧೀಶರ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಳವಳ್ಳಿ ಪಟ್ಟಣದಲ್ಲಿ ಇಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ಪ್ರತಿಭಟನಾ ಕಾರರು ದಾರಿಯುದ್ದಕ್ಕೂ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಲ್ಲಿನ ಪೇಟೆ ವೃತ್ತವನ್ನು ತಲುಪಿದ ಪ್ರತಿಭಟನಾ ಕಾರರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಂತರ ತಾಲೂಕು ಕಚೇರಿ ತಲುಪಿ ಗಣರಾಜ್ಯೋತ್ಸವ ಸಮಾರಂಭದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸುವ ಮೂಲಕ ಅವರಿಗೆ ಅಪಮಾನ ಮಾಡಿರುವ ಸದರಿ ನ್ಯಾಯಾಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದರ ಜೊತೆಗೆ ಅವರನ್ನು ನ್ಯಾಯಾಧೀಶ ಸ್ಥಾನದಿಂದ ವಜಾಗೊಳಿಸು ವಂತೆ ಆಗ್ರಹಿಸಿ ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲ ರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ಪಿ ರಾಜ್ಯಾಧ್ಯಕ್ಷ ಎಂ ಕೃಷ್ಣಮೂರ್ತಿ, ನೀವೃತ್ತ ಪ್ರಾಧ್ಯಾಪಕ ಪ್ರೊ. ರಂಗಸ್ವಾಮಿ, ಅಂಬೇಡ್ಕರ್ ವಿಚಾರ ವೇದಿಕೆ ಅಧ್ಯಕ್ಷ ಎಂ ಆರ್ ಮಹೇಶ್, ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಯತೀಶ್‌ರವರುಗಳು ಸಂವಿಧಾನವನ್ನು ಆಶಯಗಳನ್ನು ಎತ್ತಿಹಿಡಿಯಬೇಕಾದ ನ್ಯಾಯಾಧೀಶ ಸಂವಿಧಾನ ದಿನಾಚರಣೆಯಂದೇ ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿರುವುದು ಖಂಡನೀಯವಾಗಿದ್ದು ಇದು ಜಾತಿವಾದದ ಮನುವಾದಿಗಳ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದರು.
ಇAತಹ ಜಾತಿವಾದದ ಮನಸ್ಥಿತಿಯ ನ್ಯಾಯಾಧೀಶರಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖಂಡರು ಕೂಡಲೇ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ ದೇಶದ್ರೋಹ ಹಾಗೂ ಅಸ್ಪೃಶ್ಯತಾ ನಿಷೇಧ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಎಂ ಎನ್ ಜಯರಾಜು, ಹಾಡ್ಲಿ ಸುರೇಶ್, ಪವನ್ , ಮೆಹಬೂಬ್ ಪಾಷಾ, ಭರತ್ ರಾಜ್, ಮಾರ್ಕಾಲ್ ಮಾಧು, ನಟರಾಜು, ದುಗ್ಗನಹಳ್ಳಿ ನಾಗರಾಜು, ಸೇರಿದಂತೆ ಹಲವಾರು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: