ಮಳವಳ್ಳಿ ; ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ರೋಲಿಂಗ್ ಸೆಟರ್‌ಗೆ ಹಾಕಿದ್ದ ಬೀಗ ಮುರಿದು ದುಷ್ಕರ್ಮಿಗಳು ಒಳನುಗ್ಗಿ ಬೀರುವಿನಲ್ಲಿ ಇಟ್ಟಿದ್ದ 75 ಸಾವಿರ ರೂ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಜರುಗಿದೆ.
ರೋಲಿಂಗ್ ಸೆಟರ್‌ಗೆ ಹಾಕಿದ್ದ ಬೀಗವನ್ನು ಮುರಿದು ಅಲ್ಲಿಯೇ ಎಸೆದಿದ್ದು, ಸೊಸೈಟಿಯ ಒಳನುಗ್ಗಿ ಬೀರುವನ್ನು ಆಯುಧದಿಂದ ಹೊಡೆದು ಹಣವನ್ನು ಕಳ್ಳತನ ಮಾಡಿದ್ದಾರೆ
ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರ ತಂಡ ಭೇಟಿ ಪರಿಶೀಲನೆ ಮಾಡಿದರು ಸರ್ಕಲ್ ಇನ್ಸ್ ಪೆಕ್ಟರ್ ಧನರಾಜ್ , ಸಬ್ ಇನ್ಸ್ ಪೆಕ್ಟರ್ ಅಶೋಕ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಈ ಸಂಬAಧ ಬೆಳಕವಾಡಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ