December 22, 2024

Bhavana Tv

Its Your Channel

ಯುವತಿಯನ್ನು ಕೊಲೆ ಮಾಡಿ ದುಷ್ಕರ್ಮಿಗಳು ಶವವನ್ನು ಸುಟ್ಟುಹಾಕಿ ಪರಾರಿ

ಮಳವಳ್ಳಿ : ಯುವತಿಯೊಬ್ಬಳನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಸುಟ್ಟುಹಾಕಿ ಪರಾರಿಯಾಗಿರುವ. ಕೃತ್ಯವೊಂದು ಜರುಗಿದೆ.
ಮಳವಳ್ಳಿ ತಾಲ್ಲೂಕಿನ ದೊಡ್ಡೇಗೌಡನ ಕೊಪ್ಪಲು ಗ್ರಾಮದ ನೀಲಗಿರಿತೋಪಿನಲ್ಲಿ 25 ರಿಂದ 30 ವರ್ಷ ವಯಸ್ಸಿನ ಯುವತಿಯ ಶವ ಸುಟ್ಟುಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಯುವತಿಯನ್ನು ಕೊಲೆಮಾಡಿರುವ ದುಷ್ಕರ್ಮಿಗಳು ನೀಲಗಿರಿ ತೋಪಿನ ಮರದ ಎಲೆಗಳನ್ನು ಹಾಕಿ ಶವವನ್ನು ಸುಟ್ಟು ಹಾಕಿದ್ದು ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ನಿನ್ನೆ ಬೆಳಿಗ್ಗೆ ಶವ ಪತ್ತೆಯಾಗಿದೆ.
ದೇಹವೂ ಸಂಪೂರ್ಣ ಸುಟ್ಟು ಕರಕಲುಯಾಗಿರುವುದರಿಂದ ಗುರುತು ಸಿಗದ ರೀತಿ ಶವ ಕರಕಲಾಗಿ ಹೋಗಿದೆ.
ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ ಪಿ ಲಕ್ಷ್ಮಿ ನಾರಾಯಣ ಪ್ರಸಾದ್, ಸರ್ಕಲ್ ಇನ್ಸ್ ಪೆಕ್ಟರ್ ಧನರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದರು
ಈ ಸಂಬAಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ.

error: