ಮಳವಳ್ಳಿ : ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಹೋಬಳಿ ಹೂವಿನಕೊಪ್ಪಲು ಗ್ರಾಮದ ಹೊರವಲಯದ ಮನೆಯೊಂದರ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಗ್ರಾಮದ ಮಿಲ್ ಕರಿಯಪ್ಪ ಎಂಬುವವರ ಮನೆಯ ಬಳಿ ಭಾನುವಾರ ಬೆಳಗಿನ ಜಾವ 2 ಗಂಟೆ ವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಯಿಯೊಂದನ್ನು ಚಿರತೆ ಎತ್ತಿಕೊಂಡು ಹೋಗಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಇದಲ್ಲದೆ ಕಳೆದ 15 ದಿನಗಳಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ಚಿರತೆ ಪದೇ ಪದೇ ಕಾಣಿಸಿ ಕೊಂಡಿದ್ದು , ಜನರಲ್ಲಿ ಸಾಕಷ್ಟು ಆತಂಕ ಮತ್ತ ಭಯ ಮೂಡಿಸಿದೆ.
ಮಳವಳ್ಳಿ- ಮೈಸೂರು ರಸ್ತೆಗೆ ಹೊಂದಿಕೊAಡಿರುವ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದರಿAದ ವ್ಯಾಪ್ತಿಯ ಗ್ರಾಮಗಳಲ್ಲಿ ರೈತರು ತಮ್ಮ ಹೊಲ, ತೋಟಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ