ಮಳವಳ್ಳಿ: ಅನುಭವ ಮಂಟಪದಲ್ಲಿ ತಮ್ಮ ಅಮೂಲ್ಯ ಸಾಹಿತ್ಯದ ಮೂಲಕ ಸಮಾಜದ ಏಳ್ಗೆಗೆ ಶ್ರಮಿಸಿದ ಮಡಿವಾಳ ಮಾಚಿದೇವಮಾರ್ಗದರ್ಶನ ಸಮಾಜದ ಪ್ರತಿಯೊಂದು ವರ್ಗಕ್ಕೆ ಅವಶ್ಯಕತೆ ಇದೆ ಎಂದು ತಹಶೀಲ್ದಾರ್ ಎಂ.ವಿಜಯಣ್ಣ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಸರಳವಾಗಿ ನಡೆದ ಮಡಿವಾಳ ಮಾಚಿದೇವ ಜಯಂತಿ ಅಂಗವಾಗಿ ಮಾಚಿದೇವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
೧೨ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಸಮುದಾಯದ ಮಹಾನ್ ಚೇತನ ಮಾಚಿದೇವರ ಒಬ್ಬರು. ಅವರ ಮಾರ್ಗದರ್ಶನ ಪ್ರಸ್ತುತ ಸಮಾಜದ ಎಲ್ಲ ವರ್ಗಗಳಿಗೂ ಅವಶ್ಯಕವಾಗಿದೆ. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, ೧೨ನೇ ಶತಮಾನದ ಕಾಲದಲ್ಲಿ. ಇಂತಹ ಶರಣರು ಮಹಾಪುರುಷ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಜೀವನವನ್ನು ಮುಡಿಪ್ಪಿಟ್ಟಿದ್ದರು ಎಂದರು.
ಮಡಿವಾಳ ಮಾಚಿದೇವ ತಾಲ್ಲೂಕು ಸಂಘದ ಅಧ್ಯಕ್ಷ ಪ್ರಸನ್ನ, ಪುರಸಭೆ ಮಾಜಿ ಸದಸ್ಯ ಕೃಷ್ಣ, ಕಾರ್ಯದರ್ಶಿ ರಾಜಣ್ಣ, ಶಿವಲಿಂಗು, ಬಸವೇಶ್, ವೆಂಕಟೇಶ್, ನಾಗೇಂದ್ರ ರಾಮಕೃಷ್ಣ ಸೇರಿದಂತೆ ಹಲವರು ಇದ್ದರು.
ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ
More Stories
ಮಂಡ್ಯ ಅಮೃತ ಲಯನ್ಸ್ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ
ಮಳವಳ್ಳಿ ತಾಲೂಕಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಗಾರ
ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಯಿಂದ ವಿವಿಧ ಕಾರ್ಯಕ್ರಮ