December 6, 2024

Bhavana Tv

Its Your Channel

ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮರಿಸ್ವಾಮಿ ಉರುಫ್ ಕೆಂಗೋಡಿ ಆಯ್ಕೆ

ಮಳವಳ್ಳಿ : ಮಳವಳ್ಳಿ ತಾಲ್ಲೂಕು ಕೋರೇಗಾಲ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮರಿಸ್ವಾಮಿ ಉರುಫ್ ಕೆಂಗೋಡಿ ಅವರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.
ಈ ಹಿಂದೆ ಉಪಾಧ್ಯಕ್ಷರಾಗಿದ್ದ ವೆಂಕಟೇಶ್ ಅವರ ರಾಜೀನಾಮೆ ಯಿಂದ ತೆರವಾಗಿದ್ದ ಈ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮರಿಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ನಂತರ ಮಾತನಾಡಿದ ಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರೂ ಜೆಡಿಎಸ್ ಮುಖಂಡರು ಆದ ನಾಗೇಂದ್ರ ಕೋರೇಗಾಲ ಅವರು ಅಧಿಕಾರ ಹಂಚಿಕೆ ಒಪ್ಪಂದದAತೆ ವೆಂಕಟೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ತೆರವಾದ ಸ್ಥಾನಕ್ಕೆ ಎಲ್ಲಾ ಜೆಡಿಎಸ್ ಮುಖಂಡರು ಹಾಗೂ ಡೈರಿ ನಿರ್ದೇಶಕರು ಸೇರಿ ಒಮ್ಮತದ ಅಭ್ಯರ್ಥಿಯನ್ನಾಗಿ ಮರಿಸ್ವಾಮಿ ಅವರನ್ನು ಆಯ್ಕೆ ಮಾಡಿದ್ದು ಅಧ್ಯಕ್ಷರಾದ ಸಿದ್ದೇಗೌಡ ಹಾಗೂ ನೂತನ ಉಪಾಧ್ಯಕ್ಷ ಮರಿಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಡೈರಿ ಇನ್ನಷ್ಟು ಅಭಿವೃದ್ಧಿ ಹೊಂದಿ ರೈತರಿಗೆ ಉತ್ತಮ ಸೇವೆ ದೊರಕಲಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ನಂಜೇಗೌಡ, ಶೆಟ್ಟಹಳ್ಳಿ ಪ್ರಾಥಮಿಕ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆ ಎಂ ವೆಂಕಟೇಗೌಡ, ಮುಖಂಡರಾದ ಕೆ ಇ ಬಿ ಸುರೇಶ್ ಸೇರಿದಂತೆ ಎಲ್ಲಾ ನಿರ್ಧೇಶಕರು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ: ಮಲ್ಲಿಕಾರ್ಜುನ ಸ್ವಾಮಿ ಮಳವಳ್ಳಿ

error: