May 4, 2024

Bhavana Tv

Its Your Channel

ಪರಿಸರ ಸಮತೋಲನ ಕಾಪಾಡದಿದ್ದರೆ ಅಪಾಯ ಖಚಿತ ಶಾಸಕ ಸುರೇಶ್ ಗೌಡ.

ನಾಗಮಂಗಲ; ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾAತರವಾಗಲಿ ದ್ದು ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಎಂದು ತಿಳಿಸಿದರು.
ಅವರಿಂದು ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ ಮಂಡ್ಯ ಹಾಗೂ ನಾಗಮಂಗಲ ಸುಧಾ ಮೂರ್ತಿ ಮತ್ತು ಜನನಿ ಸಂಸ್ಥೆ, ವಿಶ್ವ ಜಾನಿ ಸೇವಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮವನ್ನು ಸಸಿ ನೆಡುವ ಮುಖಾಂತರ ಉದ್ದೇಶಿಸಿ ಮಾತನಾಡುತ್ತ ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸಿ ವಹಿಸಬೇಕಾಗಿರುವುದು ನಮ್ಮಗಳ ಆದ್ಯ ಕರ್ತವ್ಯವೆಂದು ಮಾತನಾಡಿದರು.

ಪ್ರತಿಯೊಬ್ಬರೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊAದು ದಿನ ಗಂಡಾAತರ ಆಗುವುದರಲ್ಲಿ ಅನುಮಾನವಿಲ್ಲ ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ನಮ್ಮಗಳ ಕರ್ತವ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ್ರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಎಪಿಎಂಸಿ ಅಧ್ಯಕ್ಷರಾದ ರಮೇಶ್ ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿಗಳಾದ ವೆಂಕಟೇಶ್ ಹಾಗೂ ವಿವಿಧ ಸಂಘಸAಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವರದಿ ; ಡಿ.ಆರ್ .ಜಗದೀಶ್ ನಾಗಮಂಗಲ

error: