April 20, 2024

Bhavana Tv

Its Your Channel

ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಸಚಿವ ಆರ್.ಅಶೋಕ್ ಭೇಟಿ.

ನಾಗಮಂಗಲ : ಪಟ್ಟಣದ ಕೆಆರ್ ಟಿಸಿ ಬಸ್ ನಿಲ್ದಾಣದ ಸೇರಿದಂತೆ ಹಲವು ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಹಾನಿಯಾಗಿರುವ ಕುರಿತು ಮಾಧ್ಯಮದಲ್ಲಿ ವರದಿ ಪ್ರಕಟವಾಗಿದ್ದ ಹಿನ್ನೆಲೆ ಬಸ್ ನಿಲ್ದಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಳೆಯಿಂದ ಪ್ರಯಾಣಿಕರಿಗೆ ಉಂಟಾದ ಸಮಸ್ಯೆಯ ಕುರಿತು ಮಾಹಿತಿ ಪಡೆದರು. ಈ ಸಮಯದಲ್ಲಿ ಡಿಪೋ ಅಧಿಕಾರಿಯೊಬ್ಬರು ಸುಮಾರು ೧೦೦೦ ಲೀ ಡೀಸಲ್ ಮಳೆಯಿಂದ ಹಾಳಾಗಿದೆ ಎಂದು ಮಾಹಿತಿ ನೀಡಿದರು. ನಂತರ ಪಟ್ಟಣದ ಸೌಮ್ಯಕೇಶವ ಸ್ವಾಮಿ ದೇವಾಲಯದ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಮನೆ ಕುಸಿತವಾಗಿದ್ದ ಸ್ಥಳಗಳಿಗೆ ಸುರಿಯುವ ಜೋರು ಮಳೆಯಲ್ಲೇ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಹಾನಿಗೀಡಾಗಿದ ಮನೆ ಮಾಲೀಕರಿಗೆ ಚೆಕ್ ವಿತರಣೆ ಮಾಡಿದರು.

ಸಣ್ಣಪುಟ್ಟ ವಿಚಾರವನ್ನು ನಾವು ಹೇಳಬೇಕಾ? ಮಳೆಯಿಂದ ಹಾನಿಗೀಡಾದ ಮನೆ ಮತ್ತು ಸ್ಥಳಗಳಿಗೆ ಭೇಟಿ ನೀಡಿದ ನಂತರ ತಾಲ್ಲೂಕು ಕಚೇರಿಗೆ ಅಗಮಿಸಿದರು. ಆ ವೇಳೆ ಜೋರು ಮಳೆ ಬೀಳುತ್ತಿದ್ದು, ಮಿನಿವಿಧಾನ ಸೌಧದ ಆವರಣದಲ್ಲಿ ಮನೆಯ ನೀರು ಹರಿಯುತ್ತಾ ಕೆರೆಯಂತಾಗಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕುಂಜ ಅಹಮದ್ ಅವರಿಗೆ ನೀರು ಹರಿಯದಂತೆ ಕ್ರಮವಹಿಸಬೇಕಾದ ಸಣ್ಣಪುಟ್ಟ ವಿಚಾರವನ್ನು ನಾವು ಹೇಳಬೇಕಾ? ಇನ್ನೊಂದು ವಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವರು ನಾಗಮಂಗಲ ತಾಲ್ಲೂಕು ಪ್ರತಿ ಬಾರಿಯೂ ಬರಗಾಲಕ್ಕೆ ತುತ್ತಾಗುತ್ತಿತ್ತು. ಆದರೆ ಈ ಬಾರಿ ಭಾರಿ ಮಳೆಯಾಗಿದ್ದು, ಇಲ್ಲಿನ ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಕೆರೆಯಂತಾಗಿದ್ದು, ಮಾಧ್ಯಮಗಳ ಮೂಲಕ ತಿಳಿಯಿತು. ಇದೇ ರೀತಿ ರಾಜ್ಯದ ಬಹುತೇಕ ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ಮಳೆಯಿಂದ ಅಂತರ್ಜಲ ವೃದ್ಧಿಯಾಗುವ ಜೊತೆಗೆ ಕೆರೆಕಟ್ಟೆಗಳು ಜೀವಕಳೆಯನ್ನು ಪಡೆಯುತ್ತವೆ. ಆದರೆ ಅತಿವೃಷ್ಟಿಯಾಗುವುದರಿಂದ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದರ ನಿರ್ವಹಣೆಗೆ ಸರ್ಕಾರವು ಸರ್ವಸನ್ನದ್ಧವಾಗಿದ್ದು, ಪರಿಹಾರಕ್ಕೆ ಅಗತ್ಯ ಪ್ರಮಾಣದ ಹಣವನ್ನು ಕಾಯ್ದಿರಿಸಲಾಗಿದೆ. ಅಲ್ಲದೇ ರಾಜ್ಯದ ಯಾವ ಭಾಗಗಳಲ್ಲಿ ಮಳೆಯಿಂದ ಹಾನಿಯಾಗಿರುವ ಮತ್ತು ಮಳೆಯಿಂದ ಕುಸಿತವಾಗುವ ಸಂಭವವಿರುವ ಮನೆಗಳ ಪಟ್ಟಿಯನ್ನು ತಯಾರಿಸಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅಲ್ಲದೇ ಪೋಡಿ ಮುಕ್ತ ಗ್ರಾಮಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗವನ್ನು ಮೀಸಲಿಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಮೀನಿರುವ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ೧೦ ಸಾವಿರ ಧನ ಸಹಾಯ ನೀಡಲಾಗುತ್ತಿದ್ದು, ಆದರೆ ಪೌತಿ ಖಾತೆಯಾಗದ ಹಿನ್ನೆಲೆಯಲ್ಲಿ ಕೆಲವರಿಗೆ ಮಾತ್ರ ಸಹಾಯಧನ ದೊರೆಯುತ್ತಿದೆ. ಈ ಸಮಸ್ಯೆಯ ನಿವಾರಣೆಗಾಗಿ ಪೌತಿ ಖಾತೆಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಜೊತೆಗೆ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿAದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರಸ್ತೆಯ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಶೀಘ್ರವಾಗಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಸುರೇಶ್ ಗೌಡ, ಜಿಲ್ಲಾಧಿಕಾರಿ ಎಸ್.ಅಶ್ವಥಿ, ತಹಶೀಲ್ದಾರ್ ಕುಂuಟಿಜeಜಿiಟಿeಜ ಅಹಮದ್, ಡಿವೈಎಸ್ಪಿ ನವೀನ್ ಕುಮಾರ್, ಸಿಪಿಐ ಸುಧಾಕರ್, ಪುರಸಭೆ ಮುಖ್ಯಾಧಿಕಾರಿ ಶೈಲಾ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ವರದಿ: ಚಂದ್ರಮೌಳಿ ನಾಗಮಂಗಲ

error: