October 20, 2021

Bhavana Tv

Its Your Channel

ಆದಿಚುಂಚನಗಿರಿಯಲ್ಲಿ ಶರನ್ನವರಾತ್ರಿಯ ಅಂಗವಾಗಿ ಅಕ್ಷರಾಭ್ಯಾಸಕ್ಕೆ ಚುಂಚಶ್ರೀಗಳಿOದ ಚಾಲನೆ

ನಾಗಮಂಗಲ. ಆದಿಚುಂಚನಗಿರಿಯಲ್ಲಿ ಶರನ್ನವರಾತ್ರಿ ಉತ್ಸವದ* ಆರನೇಯ ದಿನವಾದ ಇಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಹೋಮ, ಅಭಿಷೇಕ, ಮಹಾಪೂಜೆ ಹಾಗೂ ಅಕ್ಷರಭ್ಯಾಸ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು , ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಪುಟಾಣಿ ಮಕ್ಕಳು ಮತ್ತು ಪೋಷಕರು ಶ್ರೀಮಠದ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ದೇವಲಾಪುರ ಜಗದೀಶ್ ನಾಗಮಂಗಲ

error: