May 5, 2024

Bhavana Tv

Its Your Channel

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಗ್ರಾ.ಪಂ.ವಾಸ್ತವ್ಯ

ನಾಗಮಂಗಲ:– ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಅವರು ನುಡಿದಂತೆ ನಡೆದಿದ್ದಾರೆ. ಇಂದು ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರ ಜೊತೆ ಚರ್ಚೆ, ರಾತ್ರಿ ಅಲ್ಲೇ ವಾಸ್ತವ್ಯ

ಮಂಡ್ಯ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ದಿನೇಶ್ ಗೂಳಿಗೌಡ ಅವರು ತಮ್ಮನ್ನು ಗೆಲ್ಲಿಸಿದಲ್ಲಿ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ವಾಸ್ತವ್ಯ ಹೂಡುವುದಾಗಿ ವಾಗ್ದಾನ ಮಾಡಿದ್ದರು.

ಈ ನಿಮಿತ್ತ ಗುರುವಾರ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಡಿಗನವಿಲೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಧ್ಯಾಹ್ನ 3.30ಕ್ಕೆ ಆ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ರಾತ್ರಿ ವಾಸ್ತವ್ಯ:- ಬೆಂಡಿಗನವಿಲೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಜೊತೆ ಶಾಸಕರಾದ ದಿನೇಶ್ ಗೂಳಿಗೌಡ ಅವರು, ಸಮಗ್ರವಾಗಿ ಚರ್ಚಿಸಿ, ಪರಿಸ್ಥಿತಿಗಳನ್ನು ಅವಲೋಕಿಸುವುದರ ಜೊತೆಗೆ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ವರದಿ: ಚಂದ್ರಮೌಳಿ ನಾಗಮಂಗಲ

error: