May 5, 2024

Bhavana Tv

Its Your Channel

ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಂಸದೆ ಸುಮಲತಾ

ನಾಗಮಂಗಲ:-. ರಾಷ್ಟ್ರಧ್ವಜ ವಿಚಾರ ಈಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಹೋರಾಟವಾಗಿದ್ದು ಈ ವಿಚಾರ ದಲ್ಲಿ ನಾನು ಪಕ್ಷೇತರ ಸಂಸದೆಯಾಗಿರುವುದರಿAದ ತಟಸ್ಥನಾಗಿದ್ದೇನೆ ಎಂದು ಸಂಸದೆ ಸುಮಲತಾ ಹೇಳಿದರು.

ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸೋಮವಾರ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರಧ್ವಜ ವಿಚಾರ ವಾಗಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಹೋರಾಟವಾಗಿದೆ. ಈ ವಿಚಾರದಲ್ಲಿ ನಾನು ಏನು ಪ್ರತಿಕ್ರಿಯೆ ನೀಡಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ನಡುವಿನ ಹೋರಾಟ ಸರಿಯಲ್ಲ ಎಂದರು.

ನಾಲ್ಕು ಗ್ರಾಮಗಳಿಗೆ ಭೇಟಿ: ತಾಲೂಕಿನ ಅಂಬಲ ಜೀರಹಳ್ಳಿ, ಯಲಾದಹಳ್ಳಿ, ಸಾಮಕಹಳ್ಳಿ, ಬಿ. ಶ್ರೀರಾಮನಹಳ್ಳಿ, ಸಂಕನಹಳ್ಳಿ ಹಾಗೂ ಗಂಗವಾಡಿ ಗ್ರಾಮಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಅನುದಾನದಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಗಳನ್ನು ಪರಿಶೀಲಿಸಿದರು. ತಾಲೂಕಿನಲ್ಲಿ 5 ಗ್ರಾಮಗಳನ್ನು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿಕೊಂಡಿದ್ದು ಆ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಒಟ್ಟು 1.58 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿವೆ ಎಂದರು

ಕ್ರೆಡಿಟ್ ತಗೊಂಡ್ರೆ ಆಲ್ ದಿ ಬೆಸ್ಟ್: ಕೇಂದ್ರ ಸರ್ಕಾರದ ಹಲವಾರು ಯೋಜನೆಗಳಿಗೆ ಶಿಷ್ಟಾಚಾರ ಉಲ್ಲಂಘಿಸಿ ಶಾಸಕರು ಭೂಮಿಪೂಜೆ ನೆರವೇರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ರೀತಿ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ. ಆದರೆ ನಾನು ಇದನ್ನು ಗಂಭೀರವಾಗಿ ಪರಿಗಣಿಸಿದರೆ ದೂರು ನೀಡಿ ಕ್ರಮವಹಿಸಬಹುದು. ಆದರೆ ನನಗೆ ಆ ರೀತಿಯ ಉದ್ದೇಶವಿಲ್ಲ. ಜನರಿಗೆ ಕೆಲಸವಾಗಬೇಕು ಎಂಬುದು ನನ್ನ ಉದ್ದೇಶ. ಶಾಸಕರು ಭೂಮಿಪೂಜೆ ನೆರವೇರಿಸಿ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಕ್ರೆಡಿಟ್ ತಗೊಂಡ್ರೆ ಆಲ್ ದಿ ಬೆಸ್ಟ್ ಹೇಳುತ್ತೇನೆ ಎಂದರು.

ವರದಿ: ಚಂದ್ರಮೌಳಿ ನಾಗಮಂಗಲ

error: