December 27, 2024

Bhavana Tv

Its Your Channel

ಕೊರನಾ ಲಾಕ್‌ಡೌನ್ ಕುರಿತ ಭಾಷಣಕ್ಕೂ ಮುನ್ನ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ, ಏಪ್ರಿಲ್ 14: ಕೊರೊನಾ ಲಾಕ್‌ಡೌನ್ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಇಂದು ಬೆಳಗ್ಗೆ 10 ಗಂಟೆಗೆ ಭಾಷಣ ಮಾಡಲಿದ್ದು, ಅದಕ್ಕೂ ಮುನ್ನ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಹಲವು ಹಬ್ಬಗಳು ನಡೆಯುತ್ತಿವೆ, ಹಬ್ಬವನ್ನು ಆಚರಿಸುತ್ತಿರುವ ಎಲ್ಲರೂ ಶುಭಾಶಯವನ್ನು ಮೋದಿ ತಿಳಿಸಿದ್ದಾರೆ.

ಎಲ್ಲರೂ ಹಬ್ಬವನ್ನು ಸಂತೋಷದಿಂದ ಆಚರಣೆ ಮಾಡಿ, ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ, ಹಬ್ಬವು ಎಲ್ಲರಲ್ಲಿ ಸಹೋದರತ್ವದ ಭಾವನೆಯನ್ನು ಜಾಗೃತಗೊಳಿಸಲಿ ಎಂದು ಹೇಳಿದ್ದಾರೆ.

ಮಾರಕ ಕೊರೊನಾ ವೈರಸ್ ನಿಗ್ರಹಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್‌ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ.

ಹೀಗಾಗಿ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೀಶಿಸಿ ಮಾತನಾಡಲಿದ್ದು, ಅವರು ಏನೇನು ಘೋಷಣೆ ಮಾಡಬಹುದು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಸಾವಿನ ಸಂಖ್ಯೆ 400ರ ಗಡಿಯತ್ತ ಹೋಗುತ್ತಿದೆ. ಈ ನಡುವೆ ಎಲ್ಲಾ ರಾಜ್ಯ ಸರ್ಕಾರಗಳು ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರ ವಿಸ್ತರಿಸಬೇಕು ಎಂದು ಮನವಿ ಮಾಡಿವೆ.

source : dailyhunt

error: