ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ.
ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುಮ ರಾವಿಗೆ ಸಂಪರ್ಕ ಕಲ್ಪಿಸಲಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ವಿಶೇಷ ರೈಲುಗಳ ಟಿಕೆಟ್ ಬುಕಿಂಗ್ ಮೇ 11ರಂದು ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರುತ್ತದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶವಿರುತ್ತದೆ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.
More Stories
ಈಜಿಪ್ಟ್ ನಲ್ಲಿ ನಡೆಯಲಿರುವ ಹವಾಮಾನ ವೈಫರೀತ್ಯದ ವಿಶ್ವ ನಾಯಕರ ಸಮಾವೇಶಕ್ಕೆ ಕನ್ನಡಿಗ ಐಎಫ್ಎಸ್ ಅಧಿಕಾರಿ ಎ.ಟಿ. ದಾಮೋದರ ನಾಯ್ಕ
‘ಖೇಲ್ ರತ್ನ ಪ್ರಶಸ್ತಿ’ಯನ್ನು ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ – ಪ್ರಧಾನಿ ನರೇಂದ್ರ ಮೋದಿ ಘೋಷಣೆ
NEET-PG ಪರೀಕ್ಷೆ ಕನಿಷ್ಠ ʼ4 ತಿಂಗಳು ಮುಂದೂಡಿಕೆʼ; ಕೇಂದ್ರ ಸರ್ಕಾರ ಘೋಷಣೆ