April 26, 2024

Bhavana Tv

Its Your Channel

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ, ಸಂಗೀತ ಗಾರುಡಿಗ ವಾಜಿದ್ ಖಾನ್ ಕೊರೋನಾ ಗೆ ಬಲಿ

ಮುಂಬೈ, : ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ ನಿಧನರಾಗಿದ್ದಾರೆ. ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗೆ ಒಳಗಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

error: